ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಸಹ ಸಂಯೋಜಕ ಸತೀಶ್ ಪೂಜಾರಿ ಬಂಧನ ವಿರೋಧಿಸಿ ದಾವಣಗೆರೆಯಲ್ಲಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ,,,

ದಾವಣಗೆರೆ: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಸಹ ಸಂಯೋಜಕ ಸತೀಶ್ ಪೂಜಾರಿ ಬಂಧನ ವಿರೋಧಿಸಿ ದಾವಣಗೆರೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು, ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು

ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ಎಸಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಅರ್ಪಿಸಿದರು. ಈ ವೇಳೆ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಮುಖಂಡರು, ಮುಖಂಡರು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ, ಗೃಹ ಇಲಾಖೆ, ಸಿಎಂ ಸಿದ್ದರಾಮಯ್ಯರ ವಿರುದ್ಧ ಘೋಷಣೆ ಕೂಗಿ ದಿಕ್ಕೂಚಿ ಭಾಷಣದಲ್ಲಿ ಭಾರತ 1947ರ ಮಧ್ಯರಾತ್ರಿಯಲ್ಲಿ ನಡೆದ ಭಾರತದ ವಿಭಜನೆ ಮತ್ತು ವಿಭಜನೆಗೆ ಮೊದಲು ಈ ದೇಶದಲ್ಲಿ ಏನೇನು ಘಟನೆಗಳು ಘಟಿಸಿತ್ತು ಅನ್ನುವ ಸತ್ಯ ಸಂಗತಿಗಳ ಬಗ್ಗೆ ಮಾತನಾಡಿದ್ದಾರೆ. ಇದನ್ನೇ ಅಪರಾಧ ಎಂದು ಪರಿಗಣಿಸಿ ಬಂಧಿಸಿರುವುದು ಸರಿಯಲ್ಲ ಎಂದು ಆರೋಪಿಸಿದರು

ಸ್ಥಳೀಯ ಪೊಲೀಸರು ನಿನ್ನೆ ರಾತ್ರಿ ಈ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣವನ್ನು ಮಾಡಿದ್ದೀರಿ ಎಂದು ಸುಳ್ಳು ಆರೋಪ ಹೊರಿಸಿ ಐಪಿಸಿ ಸೆಕ್ಷನ್ 153 ಎ ಮತ್ತು 295 ಎ ಅಡಿಯಲ್ಲಿ ಸುಮೊಟೋ ಕೇಸ್ ದಾಖಲಿಸಿ ನೊಟೀಸ್ ಕೂಡ ಜಾರಿ ಮಾಡದೇ ಗಂಭೀರ ಅಪರಾಧವೆಸಗಿದ ಆರೋಪಿಯನ್ನು ಬಂಧಿಸುವಂತೆ ಮಧ್ಯರಾತ್ರಿ ದಾವಣಗೆರೆಯ ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸತೀಶ್ ಅವರನ್ನು ಬಂಧಿಸಲಾಗಿದೆ. ಈ ಕ್ರಮವನ್ನು ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತವು ಬಲವಾಗಿ ಖಂಡಿಸುತ್ತದೆ ಎಂದು ಹೇಳಿದರು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!