

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನಲೆ ಕೇರಳದಿಂದ ರಾಜ್ಯಕ್ಕೆ ಪ್ರಾಣಿಗಳ ಸಾಗಾಣಿಕೆಯನ್ನು ನಿಷೇಧಿಸಲಾಗಿದು. ಹಾಗೂ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ನಲ್ಲಿ ವಿಶೇಷ ತಂಡ ರಚನೆ ಮಾಡಿ ತಪಾಸಣೆ ನಡೆಸಲಾಗುತ್ತಿದೆ…
ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನಲೆ ಇದೀಗ ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಇದು ಹಂದಿಗಳಲ್ಲಿ ಕಾಣಿಸಿಕೊಳ್ಳುವ ರೋಗವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೇರಳದಿಂದ ರಾಜ್ಯಕ್ಕೆ ಪ್ರಾಣಿಗಳ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ. ಜೊತೆಗೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ನಲ್ಲಿ ವಿಶೇಷ ತಂಡ ರಚನೆ ಮಾಡಿ, ತಪಾಸಣೆ ಮಾಡಲಾಗುತ್ತಿದೆ. ಇದೀಗ ಸ್ಥಳಕ್ಕೆ ಹೆಚ್.ಡಿ ಕೋಟೆ ತಹಶೀಲ್ದಾರ್ ಸಣ್ಣ ರಾಮಪ್ಪ, ತಾಲೂಕು ಆರೋಗ್ಯಧಿಕಾರಿ ರವಿಕುಮಾರ್ ಹಾಗೂ ಪಶು ಇಲಾಖೆ ನಿರ್ದೇಶಕ ಪ್ರಸನ್ನ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಜೊತೆಗೆ ಹಂದಿಗಳನ್ನು ಎರಡು ಫಾರ್ಮ್‌ಗಳಲ್ಲಿ ಕೊಲ್ಲಲು ಆದೇಶವನ್ನು ಜಿಲ್ಲಾಧಿಕಾರಿಗಳು ನೀಡಿದ್ದಾರೆ.
ಆ.19 ರಂದು ಕೇರಳದ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ಏಕಾಏಕಿ ವರದಿಯಾಗಿದ್ದು, ಈ ಬಗ್ಗೆ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ದೃಢಪಟ್ಟಿಸಿದ್ದರು. ನಂತರ, ಜಿಲ್ಲಾಧಿಕಾರಿಗಳು ಮಲೆಯಂಪಾಡಿಯಲ್ಲಿರುವ ಮತ್ತು 10 ಕಿಮೀ ವ್ಯಾಪ್ತಿಯಲ್ಲಿರುವ ಹಂದಿಗಳನ್ನು ಕೊಲ್ಲಲು ಆದೇಶ ನೀಡಿದ್ದು, ಅದನ್ನು ಶಿಷ್ಟಾಚಾರದ ಪ್ರಕಾರ ಶವಗಳನ್ನು ಹೂಳಲು ಹೇಳಿದ್ದರೆ.ಜೊತೆಗೆ ಹಂದಿ ಮಾಂಸದ ವಿತರಣೆ, ಮಾರಾಟ ಮತ್ತು ಸಾಗಣೆಯನ್ನು ಮೂರು ತಿಂಗಳವರೆಗೆ ನಿಷೇಧ ಮಾಡಲಾಗಿದೆ ಎಂದು ಹೇಳಲಾಗುತ್ತದೆ
ಇನ್ನೂ ಹಂದಿ ಸಾಕಾಣಿಕೆ ಕೇಂದ್ರದ ಸುತ್ತಲಿನ ಒಂದು ಕಿ.ಮೀ ಪ್ರದೇಶವನ್ನು ಸೋಂಕಿತ ಪ್ರದೇಶವೆಂದು ಘೋಷಿಸಲಾಗಿದ್ದು, ಮತ್ತು 10 ಕಿಮೀ ವ್ಯಾಪ್ತಿಯನ್ನು ರೋಗ ಕಣ್ಗಾವಲು ವಲಯ ಎಂದು ಅಧಿಕೃತ ಮೂಲಗಳು ತಿಳಿಸಿತ್ತು. ಈ ಪ್ರದೇಶದಲ್ಲಿ ಹಂದಿ ಮಾಂಸದ ವಿತರಣೆ ಮತ್ತು ಮಾರಾಟ, ಸಾಗಣೆಯನ್ನು ಮೂರು ತಿಂಗಳವರೆಗೆ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.