ಸಮುದಾಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ…

ದಾವಣಗೆರೆ(ಆ 21), ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬಿ.ಇಡ್ ಹಾಗೂ ಡಿ.ಇಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ, ಆಸಕ್ತ ವಿದ್ಯಾರ್ಥಿಗಳು ಸೆಪ್ಟೆಂಬರ್ 21 ರೊಳಗಾಗಿ ಸೇವಾ ಸಿಂಧು Portal https://Sevasindhu.Karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆ ಸ. ಸಂ. 8277799990, ಕಚೇರಿ ದೂ. ಸಂ. 08192 250022 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಜೊತೆಗೆ ಗ್ರಾಮೀಣ ಮತ್ತು ನಗರ ಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಿದ್ಯಾಭ್ಯಾಸ ಮುಂದುವರಿಸಲು ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಮಾನ್ಯತೆ ಪಡೆದಿರುವ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಇಡ್ ಹಾಗೂ ಡಿ.ಇಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ

  • Related Posts

    ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ : ಸೆ. 26 ಅರ್ಜಿ ಸಲ್ಲಿಸಲು ಕೊನೆ ದಿನ

    Bengaluru: ರಾಜ್ಯ ಕಾರ್ಮಿಕ ಇಲಾಖೆಯ ವತಿಯಿಂದ ರಾಜ್ಯ ಕಟ್ಟಡ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯ (Free laptop for PUC students) ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ (Free laptop) ನೀಡಲು ಅರ್ಜಿ(Application)ಆಹ್ವಾನಿಸಲಾಗಿದೆ. ಪ್ರಥಮ ಅಥವಾ ದ್ವಿತೀಯ ಪಿಯುಸಿ ತರಗತಿಯಲ್ಲಿ…

    ಆಗಸ್ಟ್ 30 ರಂದು ಜಿಲ್ಲೆಯಾದ್ಯಂತ ಗೃಹಲಕ್ಷ್ಮಿ ಯೋಜನೆಗೆ ಚಾಲನೆ,,

    ಆಗಸ್ಟ್ 30 ರಂದು ಜಿಲ್ಲೆಯಾದ್ಯಂತ ಗೃಹಲಕ್ಷ್ಮಿ ಯೋಜನೆಗೆ ಚಾಲನೆದಾವಣಗೆರೆ; ಆ. 28 (ಕರ್ನಾಟಕ ವಾರ್ತೆ) : ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!