ಜಿಲ್ಲೆಯಲ್ಲಿ ಪಹಣಿ ತಿದ್ದುಪಡಿ ಆಂದೋಲನಒಂದೇ ದಿನದಲ್ಲಿ 3 ಸಾವಿರಕ್ಕೂ ಹೆಚ್ಚು ಪಹಣಿ ತಿದ್ದುಪಡಿಗೆ ಅಸ್ತು; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಮಾಹಿತಿ

ದಾವಣಗೆರೆ,ಆ.23(ಕರ್ನಾಟಕ ವಾರ್ತೆ) ರೈತರು ತಮ್ಮ ಭೂಮಿಯ ದಾಖಲೆಗಳನ್ನು ಸರಿಪಡಿಸಲು ತಾಲ್ಲೂಕು ಕಚೇರಿಗೆ ಹೋಗುವುದು ಸಾಮಾನ್ಯ ಆದರೆ ಜಿಲ್ಲಾ ಆಡಳಿತ ಒಂದೇ ದಿನದಲ್ಲಿ ಮೂರು ಸಾವಿರಕ್ಕಿಂತ ಹೆಚ್ಚು ಪಹಣಿ ತಿದ್ದುಪಡಿ ಪ್ರಕರಣಗಳನ್ನು ಇತ್ಯರ್ಥ ಮಾಡಿ ಸರಿಪಡಿಸಿದ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ತುಲುಪಿಸುವ ವ್ಯವಸ್ಥೆಯನ್ನು ಜಿಲ್ಲಾ ಆಡಳಿತ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ.

ಜಿಲ್ಲೆಯ ಆರೂ ತಾಲ್ಲೂಕುಗಳಲ್ಲಿ ಒಟ್ಟು 4600 ಕ್ಕಿಂತ ಹೆಚ್ಚು ಪಹಣಿ ತಿದ್ದುಪಡಿ ಪ್ರಕರಣಗಳು ಬಾಕಿ ಇದ್ದು ರೈತರು ಇದರಿಂದ ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದರು. ಇದನ್ನು ಜಿಲ್ಲಾ ಆಡಳಿತ ಮನಗಂಡು ಶೀಘ್ರದಲ್ಲಿ ತಿದ್ದುಪಡಿ ಮಾಡಿ ದಾಖಲೆಗಳನ್ನು ಸರಿಪಡಿಸಿಕೊಡಲು ಉದ್ದೇಶಿಸಿ ಆಗಸ್ಟ್ 23 ರಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಮೂಲ ಕಡತಗಳೊಂದಿಗೆ ತಿದ್ದುಪಡಿ ಮಾಡುವ ಪ್ರಕ್ರಿಯೆಯನ್ನು ಕೈಗೊಳ್ಳಲಾಯಿತು.


ತಿದ್ದಪಡಿ ಪ್ರಕರಣಗಳಲ್ಲಿ ಹೆಸರು ತಪ್ಪಾಗಿರುವುದು, ವಿಸ್ತೀರ್ಣ ವ್ಯತ್ಯಾಸ, ಇಂಡೀಕರಣ ಆಗದೇ ಇರುವುದು, ಎರಡು ಭಾರಿ ಮ್ಯುಟೇಷನ್ ದಾಖಲು, ಕಾಲಂ 3 ಮತ್ತು 9 ರಲ್ಲಿ ತಪ್ಪಾಗಿ ನಮೂದು ಆಗಿರುವುದು ಸೇರಿದಂತೆ ವಿವಿಧ ಬಗೆಯ 9 ತರಹದ ತಿದ್ದುಪಡಿಗಳನ್ನು ಸರಿಪಡಿಸಲಾಯಿತು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!