

ದಾವಣಗೆರೆ(ಆ 23): ಚಂದ್ರನ ದಕ್ಷಿಣ ಧ್ರುವದಲ್ಲಿ ಚಾಂದ್ರಯಾನ ಯಶಸ್ವಿಯಾಗಿ ಇಳಿದಿರುವುದು ನಮ್ಮ ವೈಜ್ಞಾನಿಕ ಪರಾಕ್ರಮ ಮತ್ತು ದೃಢತೆಗೆ ಸಾಕ್ಷಿಯಾಗಿದೆ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಮತ್ತು ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರು ಸಂತಸ ವ್ಯಕ್ತಪಡಿಸಿದ್ದಾರೆ.

ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಪ್ರೋತ್ಸಾಹದಡಿ ಬಾಹ್ಯಾಕಾಶ ತಂತ್ರಜ್ಞಾನವನ್ನು ಮುಂದುವರಿಸುವ ನಮ್ಮ ರಾಷ್ಟ್ರದ ಬದ್ಧತೆಯು ಭಾರತವು ಜಾಗತಿಕ ನಾಯಕನಾಗಲು ಕಾರಣವಾಗಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಈ ಗಮನಾರ್ಹ ಸಾಧನೆಯನ್ನು ಸಾಧಿಸಿದ್ದಕ್ಕಾಗಿ ಮತ್ತು ಆವಿಷ್ಕಾರದ ಗಡಿಗಳನ್ನು ವಿಸ್ತರಿಸಿದ್ದಕ್ಕಾಗಿ ಇಸ್ರೋದ ಎಲ್ಲಾ ವಿಜ್ಞಾನಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.