45 ದಿನಗಳ ಕೈಮಗ್ಗ ನೇಯ್ಗೆ ತರಬೇತಿಗಾಗಿ ಅರ್ಜಿ ಅಹ್ವಾನ,,

ದಾವಣಗೆರೆ; ಆ.24: 2023-24 ನೇ ಸಾಲಿನ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಜಿಲ್ಲಾವಲಯ ಯೋಜನೆಯಡಿ 45 ದಿನಗಳ ಕೈಮಗ್ಗ ನೇಯ್ಗೆ ತರಬೇತಿಗಾಗಿ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

18-35 ವರ್ಷ ವಯೋಮಾನದವರಾಗಿ 5ನೇ ತರಗತಿ ವ್ಯಾಸಂಗ ಮಾಡಿರಬೇಕು. ಆಸಕ್ತರು ಅರ್ಜಿ ನಮೂನೆಯೊಂದಿಗೆ ವಿದ್ಯಾರ್ಹತೆ ದಾಖಲಾತಿ, ನಿವಾಸಿ ದೃಢೀಕರಣ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‍ಬುಕ್ ಹಾಗೂ ಭಾವಚಿತ್ರದೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಕೈಮಗ್ಗ ನೇಕಾರರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನೋಂದಣಿಯಾದ ಕೈಮಗ್ಗ ನೇಕಾರರ ಸಹಕಾರ ಸಂಘಗಳ ಮೂಲಕ ಕೈಮಗ್ಗ ನೇಯ್ಗೆ ತರಬೇತಿಯನ್ನು ನೀಡಲಾಗುವುದು. ತರಬೇತಿ ಪಡೆದ ನಂತರ ಕೈಮಗ್ಗ ನೇಕಾರರ ಸಹಕಾರ ಸಂಘಗಳಲ್ಲಿ ಉದ್ಯೋಗ ಪಡೆಯಲು ಅವಕಾಶವಿರುತ್ತದೆ.

ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ, ಪಟ್ಟಸಾಲೆ ಕೈಮಗ್ಗ ನೇಕಾರರ ಉತ್ಪಾದನೆ ಮತ್ತು ಮಾರಾಟ ಸಹಕಾರ ಸಂಘನಿ, ಶ್ರೀರಾಮ ಬಡಾವಣೆ, (ನೇಕಾರಕಾಲೋನಿ) ಕೊಂಡಜ್ಜಿ ರಸ್ತೆ, ಮೊ.9743426985, ಕಾರ್ಯದರ್ಶಿ, ಮಾರ್ಕಂಡೇಯ ಹತ್ತಿ ಕೈಮಗ್ಗ ನೇಕಾರರ ಸಹಕಾರ ಸಂಘನಿ, ಮೇನ್ರೋಡ್, ಗುತ್ತೂರು. ಮೊ.9916039303, ಅಧ್ಯಕ್ಷರು/ಕಾರ್ಯದರ್ಶಿ, ಶ್ರೀರೇಣುಕ ಕೈಮಗ್ಗ ನೇಕಾರರ ವಿವಿದೋದ್ದೇಶ ಮತ್ತು ಅಭಿವೃದ್ಧಿ ಸಹಕಾರ ಸಂಘ ನಿ, ವಿಜಯನಗರ ಬಡಾವಣೆ, ಕೊಂಡಜ್ಜಿ ರಸ್ತೆ, ಮೊ. 9449364823, ಕಾರ್ಯದರ್ಶಿ, ಹತ್ತಿ ಕೈಮಗ್ಗ ನೇಕಾರರ ಸಹಕಾರ ಸಂಘನಿ, ಸುರಹೊನ್ನೆ, ನ್ಯಾಮತಿ ತಾಲ್ಲೂಕು. ಮೊ.9916300206 ನೇಕಾರರ ಸಹಕಾರ ಸಂಘಗಳನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಲು ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕ ಶಿವಲಿಂಗಪ್ಪ ಎನ್ ಕುಂಬಾರ ತಿಳಿಸಿದ್ದಾರೆ.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!