ಬಿಳಿಚೋಡು ಗ್ರಾಮದಲ್ಲಿ ಅಂಚೆ ಕಚೇರಿಯಲ್ಲಿ ಮಹಿಳಾ ಸಮ್ಮಾನ್ ಪತ್ರ ಮೇಳ..


ಜಗಳೂರು ಆ. 25 : ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಗುರುವಾರ ಅಂಚೆ ಕಚೇರಿಯಲ್ಲಿ ಮಹಿಳಾ ಸಮ್ಮಾನ್ಉಳಿತಾಯ ಪತ್ರ ಮೇಳ ನಡೆಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಅಂಚೆ ಅಧೀಕ್ಷಕ ಚಂದ್ರಶೇಖರ್ ಮಾತನಾಡಿ, 2023ನೇ ಏ.1 ರಿಂದ ಮಹಿಳಾ ಸಮ್ಮಾನ್ ಉಳಿತಾಯ ಯೋಜನೆ ಪ್ರಾರಂಭವಾಗಿದೆ. ಕೇಂದ್ರ ಸರಕಾರದ ಯೋಜನೆ ಮಹಿಳೆಯರು ಹಾಗೂ ಹೆಣ್ಣು ಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ. ಮಹಿಳಾ ಸಬಲೀಕರಣ ಈ ಯೋಜನೆಯ ಮೂಲ ಉದ್ದೇಶ ಆಗಿರುತ್ತದೆ ಎಂದರು.


ಮಹಿಳಾ ಸಮ್ಮಾನ ಉಳಿತಾಯ ಪತ್ರ ತೆರೆಯುವ ಗ್ರಾಹಕರಿಗೆ ಶೇ.7.5 ದರದಲ್ಲಿ ಬಡ್ಡಿ ಸಿಗುತ್ತದೆ. ಎರಡು ವರ್ಷಗಳ ಈ ಯೋಜನೆ ಉಳಿದ ನಿರ್ದಿಷ್ಟ ಠೇವಣಿ ಯೋಜನೆಗೆ ಹೋಲಿಸಿದರೆ ಹೆಚ್ಚು ಲಾಭದಾಯಕ ಹಾಗೂ ಈ ಯೋಜನೆ 2025ನೇ ಮಾರ್ಚ್ 31ರವರೆಗೆ ಲಭ್ಯವಿರುತ್ತದೆ.
ದಾವಣಗೆರೆ ಅಂಚೆ ವಿಭಾಗದಲ್ಲಿ ಮಹಿಳಾ ಸಮ್ಮಾನ ಉಳಿತಾಯ ಪತ್ರ ಯೋಜನೆ ಎಲ್ಲಾ ಮಹಿಳೆಯರಿಗೆ ತಲುಪಿಸಲು ಅಂಚೆ ಕಚೇರಿಗಳಲ್ಲಿ ಮೇಳ ಆಯೋಜಿಸಲಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಖಾತೆ ತೆರೆದ ಎಲ್ಲಾ ಅಂಚೆ ಸಿಬ್ಬಂದಿಗೆ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು. ಒಂದು ಮೇಳದಲ್ಲಿ 555 ಖಾತೆ ತೆರೆದು ಬಿಳಿಚೋಡು ಮೊದಲ ಸ್ಥಾನದಲ್ಲಿದ್ದು ಒಟ್ಟು 18 ಲಕ್ಷ 4 ಸಾವಿರ ಠೇವಣಿ ಸಂಗ್ರಹವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ಅಂಚೆ ಅಧೀಕ್ಷಕ ಗುರು ಪ್ರಸಾದ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಚೆ ಸಹಾಯಕ ನಿರ್ದೇಶಕ ತಿಪ್ಪೇಸ್ವಾಮಿ, ಅಂಚೆ ಉಪ ಉಪ ಪಾಲಕ ರಾಜಶೇಖರ, ಜಾಕಿರ್ ಹುಸೇನ್, ರೇವಣ ಸಿದ್ದಪ್ಪ, ಶಿಧರ ಮೂರ್ತಿ, ಪುರುಷೋತ್ತಮ, ಬಿಳಿಚೋಡು ಅಂಚೆ ಕಚೇರಿ ಸಿಬ್ಬಂದಿ ಹಾಗೂ ಜಗಳೂರು ಅಂಚೆ ಕಚೇರಿ ಎಲ್ಲಾ ಸಿಬ್ಬಂದಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!