

ಬೆಂಗಳೂರು ( ಆ24).. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ ಚಾಲೆಂಜಿಂಗ್ ಸ್ಟಾರ್ ದರ್ಶನ ತೂಗುದೀಪ ಹಾಗೂ ಮಾಧ್ಯಮದವರ ನಡುವಿನ ಕಲಹ ಕೊನೆಗೂ ಸುಖಾಂತ್ಯಗೊಂಡಿದೆ. ಈ ವಿಚಾರವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರೇ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಅಭಿಮಾನಿಗಳಿಗೆ ವರಮಹಾಲಕ್ಷ್ಮೀ ಹಬ್ಬದ ದಿನ ಸಿಹಿಯಾದ ಉಡುಗೊರೆ ಕೊಟ್ಟಿದ್ದಾರೆ. ಫೇಸ್ ಬುಕ್ ಹಾಗೂ ಟ್ವಿಟ್ಟರ್ ನಲ್ಲಿ ಪತ್ರವೊಂದನ್ನು ಹಾಕಿದ್ದು, ಈ ಮೂಲಕ ಪ್ರಕರಣ ಸುಖಾಂತ್ಯಗೊಂಡಿದೆ ಎಂದು ದರ್ಶನ್ ಅವರೇ ಹೇಳಿಕೊಂಡಿದ್ದಾರೆ.

ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಹಾಗೂ ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕ ಉಂಟಾಗಿತ್ತು . ಈ ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ , ಮಿತ್ರ ರಾಕ್ ಲೈನ್ ವೆಂಕಟಕೇಶ್ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದು ಇಡೀ ಪ್ರಕರಣ ಸುಖಾಂತ್ಯಗೊಂಡಿದೆ. ಕೆಲ ವರ್ಷಗಳ ಹಿಂದಿನ ನನ್ನ ಆಡಿಯೋ ಒಂದು ದುರುದ್ದೇಶಪೂರ್ವಕವಾಗಿ ವೈರಲ್ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು . ಅದು ಮಾಧ್ಯಮದ ಇತರ ವ್ಯಕ್ತಿಗಳನ್ನು ಕುರಿತು ಆಡಿದ ಮಾತಾಗಿರಲಿಲ್ಲ. ಆ ವ್ಯಕ್ತಿ ಯಾವ ದುರುದ್ದೇಶದಿಂದ ಮಾಡಿದ್ದರೂ ಗೊತ್ತಿಲ್ಲ. ಆದರೂ ಆ ವ್ಯಕ್ತಿಗೆ ಒಳ್ಳೆಯದಾಗಲಿ ಮುಂದೆ ಆ ವ್ಯಕ್ತಿ ಈರೀತಿಯ ದುರುದ್ದೇಶವನ್ನು ಮರುಕಳಿಸದಿರಲಿ.

ಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ಷಮೆ ಇರಲಿ. ಒಂದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮಗಳ ಅಗತ್ಯವಿದೆ. ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ. ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮಗಳು ಪ್ರೀತಿಯಿಂದ ನೀಡಿದ ಪ್ರಚಾರದ ಪಾಲೂ ಸಾಕಷ್ಟಿದೆ. ಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣ.
ಕನ್ನಡ, ಕನ್ನಡಿಗರು, ಕನ್ನಡ ನೆಲ, ಜಲ, ಕನ್ನಡ ಚಿತ್ರರಂಗದ ಪ್ರಗತಿಗೆ ಜೊತೆಯಾಗಿ ಕೆಲಸ ಮಾಡೋಣ. ಪ್ರೀತಿಯಿರಲಿ , ನನ್ನ ಪ್ರೀತಿಯ ಸೆಲೆಬ್ರಿಟಿಗಳು ನನ್ನ ಭಾವನೆಯನ್ನು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ .ಎಂದು ಕ್ಷೇಮೆ ಕೆಳಿದ್ದರೆ ಕೆಲ ವಿದ್ಯುನ್ಮಾನ ಮಾಧ್ಯಮಗಳಲ್ಲಿ ನಟ ದರ್ಶನ್ ತೂಗುದೀಪ ಅವರ ಸುದ್ದಿ ಪ್ರಸಾರ ಮಾಡಲು ಸ್ವಯಂಪ್ರೇರಿತರವಾಗಿ ನಿರ್ಬಂಧ ಹೇರಿಕೊಂಡಿದ್ದರು. ದರ್ಶನ್ ತೂಗುದೀಪ ಅವರ ಸಿನಿಮಾಗಳ ಪ್ರಚಾರ, ಅವರ ಕುರಿತಾದ ಸುದ್ದಿಗಳನ್ನು ಪ್ರಸಾರ ಮಾಡುತ್ತಿರಲಿಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ಬಂದಿದ್ದ ಪ್ರತಿಕ್ರಿಯೆ, ಅಭಿಮಾನಿಗಳ ಆಕ್ರೋಶ ಎಲೆಕ್ಟ್ರಾನಿಕ್ ಮಾಧ್ಯಮಗಳ ಕುರಿತಾದ ಅವಹೇಳನ, ವಾರ್ ಎಲ್ಲದಕ್ಕೂ ತೆರೆ ಬಿದ್ದಂತಾಗಿದೆ. ದರ್ಶನ್ ತೂಗುದೀಪ ಅವರು ಕೊನೆಗೂ ಮಾಧ್ಯಮದವರ ಮುಂದೆ ಕ್ಷೇಮೆ ಕೆಳಿದ್ದರೆ, ದರ್ಶನ್ ತೂಗುದೀಪ ಅವರ ಫೇಸ್ ಬುಕ್ ವಾಲ್ ನಲ್ಲಿ ದರ್ಶನ್ ಅವರೇ ಬರೆದುಕೊಂಡಿದ್ದಾರೆ.