ಅಲ್ಪಸಂಖ್ಯಾತರ ಸಮುದಾಯಗಳಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ,,


ದಾವಣಗೆರೆ; ಆ. 28 : ಪ್ರಸಕ್ತ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಸಮುದಾಯಗಳಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಶ್ರಮ ಶಕ್ತಿ ಯೋಜನೆ, ಶ್ರಮಶಕ್ತಿ (ವಿಶೇಷ ಮಹಿಳಾ ಯೋಜನೆ), ಗಂಗಾ ಕಲ್ಯಾಣ ಯೋಜನೆ, ಟ್ಯಾಕ್ಸಿ, ಗೂಡ್ಸ್, ಆಟೋರಿಕ್ಷ ವಾಹನ ಖರೀದಿಸಲು ಸಹಾಯಧನ ಯೋಜನೆ, ವೃತ್ತಿಪ್ರೋತ್ಸಾಹ ಯೋಜನೆ, ಅರಿವು ಸಿಇಟಿ, ನೀಟ್(ಅಇಖಿ/ಓಇಇಖಿ) ವಿದ್ಯಾಭ್ಯಾಸ ಸಾಲ ಯೋಜನೆ ನವೀಕರಣ(ರಿನ್ಯೂವಲ್), ಸಮುದಾಯ ಆಧಾರಿತ ತರಬೇತಿ ಯೋಜನೆಗಳಡಿ ಸಾಲ ಸೌಲಭ್ಯವನ್ನು ನೀಡಲಾಗುವುದು.
ಅರ್ಹ ಮತ್ತು ಆಸಕ್ತರು ಸೆಪ್ಟೆಂಬರ್ 25 ರೊಳಗಾಗಿ ವೆಬ್‍ಸೇಟ್ ಮೂಲಕ ಅರ್ಜಿ ಸಲ್ಲಿಸಿ ಅರ್ಜಿ ಪ್ರಿಂಟ್ ಪಡೆದು, ಅಗತ್ಯ ದಾಖಲೆಗಳೊಂದಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ(ನಿ), ಜಿಲ್ಲಾ ಕಛೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ(ನಿ), ಕುರುಬರ ಹಾಸ್ಟೇಲ್ ಕಟ್ಟಡ ಜಯದೇವ ಸರ್ಕಲ್ ದೂ.ಸಂ, 08192 232349 ಗೆ ಸಂಪರ್ಕಿಸಲು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!