ನಾನು ಬಿಜೆಪಿ ಬಿಟ್ಟು ಕಾಂಗ್ರೇಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲಾ…ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿಕೆ.

ದಾವಣಗೆರೆ (ಆ 29)..ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರವನ್ನು ನಾನು ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗೂ ತಲುಪಿಸುವ ಕೆಲಸ ನಾನು ಮಾಡಿದ್ದೇನೆ, ನಾನು ಬಿಜೆಪಿ ಬಿಡುತ್ತೇನೆಂದು ಎಲ್ಲೂ ಹೇಳಿಲ್ಲಾ ಬಿಜೆಪಿ ಪಾರ್ಟಿ ಆಫೀಸ್ ನಿಂದ ರೇಣುಕಾಚಾರ್ಯ ಕಾಂಗ್ರೇಸ್ ಸೇರುತ್ತಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ‌. ನಾನು ಬಿಜೆಪಿ ಬಿಟ್ಟು ಕಾಂಗ್ರೇಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲಾ.ನಾವು ಕಾಂಗ್ರೇಸ್ ಮುಕ್ತ ಕರ್ನಾಟಕ ಮಾಡುತ್ತೇವೆಂದು ಹೇಳುತ್ತಿದ್ದೇವು,

ಆದರೇ ಆ ಪರಿಸ್ಥಿತಿ ನಮಗೆ ಬಂದಿದೆ. ನಾನು ಕ್ಷೇತ್ರದ ಸಮಸ್ಯೆಗಾಗೀ ಕಾಂಗ್ರೇಸ್ ನಾಯಕರನ್ನು ಭೇಟಿ ಮಾಡಿದರೆ ಏನು ತಪ್ಪು
ರಾಜ್ಯದ ಅಧ್ಯಕ್ಷರ ಅವಧಿ ಮುಗಿದರೂ ಇನ್ನೂ ರಾಜ್ಯಾಧ್ಯಕ್ಷರ‌ ನೇಮಕ ಮಾಡಿಲ್ಲಾ, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲಾ.

ಇದರಿಂದ ಯಡಿಯೂರಪ್ಪನವರ ಮನಸ್ಸಿಗೆ ಬಹಳ ನೋವುಂಟಾಗಿದೆ. ಕೆಲವರು ಪತ್ರಿಕಾ ಹೇಳಿಕೆ ‌ನೀಡುವ ಟೈಗರ್ಸ್ ಗಳಾಗಿದ್ದಾರೆ‌. ಪಕ್ಷ ನನಗೆ ತಾಯಿ ಸಮಾನ ಆದು ಪಕ್ಷ‌ ಬಿಡುವ ಪ್ರಶ್ನೇಯೇ ಇಲ್ಲಾ.ಕೆಲ ನಾಯಕರ ನಡೆಯಿಂದ ನನ್ನ ಮನಸ್ಸಿಗೆ ನೋವುಂಟಾಗಿದೆ ಅದನ್ನು ಖಂಡಿಸುತ್ತೇನೆ‌ .ಯಡಿಯೂರಪ್ಪನವರನ್ನು ಕಡೆಗಣಿಸಿದ್ದೇ ಪಕ್ಷಕ್ಕೆ ಶಾಪವಾಗಿದೆ‌ರೇಣುಕಾಚಾರ್ಯ ಬೆಳೆಯುತ್ತಾನೆಂದು ತುಳಿಯುವ ಕೆಲಸ ಮಾಡಿದರು.

ಮಾನು ಮಾತಾಡಿದ ತಕ್ಷಣ ರೇಣುಕಾಚಾರ್ಯ ‌ಪಕ್ಷ ಬಿಡುತ್ತಾನೆಂದು ಅಭಿಸುತ್ತಿದ್ದಾರೆ‌ ಯಾರು ರಾಜಕೀಯವಾಗಿ ಬೆಳೆಯುತ್ತಾರೋ ಅವರನ್ನು ಕತ್ತಿರುಸುತ್ತಾರೆ, ಯಾರು ಬಕೇಟ್ ಹಿಡಿಯುತ್ತಾರೋ ಅವರನ್ನು ಬೆಳೆಸುತ್ತಾರೆ. ವಿಜಯೇಂದ್ರ ಅವರಿಗೆ ಸಾಮರ್ಥ್ಯ ಇದೇ ಅವರಿಗೆ ಅವಕಾಶ ಕೊಡುತ್ತಿಲ್ಲಾ.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!