

ಅಣ್ಣ ತಂಗಿಯ ಜೀವನದ ಒಂದು ಉತ್ತಮ ಪ್ರೀತಿಯ ಸಂಕೇತ ರಾಖಿ ಹಬ್ಬವಾಗಿದ್ದು, ಒಬ್ಬರನ್ನು ಪರಸ್ಪರ ರಕ್ಷಣೆ ಮಾಡುವ ಮನಸ್ಸನ್ನು ಹೊಂದಿರುತ್ತಾರೆ. ರಕ್ಷಾ ಬಂಧನ ಪ್ರಾಚೀನ ಕಾಲದಿಂದ ಪ್ರಾಮುಖ್ಯತೆ ಹೊಂದಿದ್ದು,ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬವಾಗಿದೆ. ಆ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುವುದು ವಾಡಿಕೆ.
ರಾಖಿ ಹಬ್ಬ ಉತ್ತರ ಭಾರತದಲ್ಲಿ ಇದ್ದಷ್ಟು ಜನಪ್ರಿಯತೆ ಕರ್ನಾಟಕದಲ್ಲಿ ಇಲ್ಲ. ಆದರೂ, ಇತ್ತೀಚೆಗಿನ ದಿನಗಳಲ್ಲಿ ಯುವ ಸಮುದಾಯದಲ್ಲಿ ರಾಖಿ ಕಟ್ಟಿ ಅಣ್ಣನ ಆಶೀರ್ವಾದ ಪಡೆಯುವ ಸಂಸ್ಕೃತಿ ಹೆಚ್ಚಾಗಿದೆ. ಅದರಲ್ಲೂ ಸೆಲೆಬ್ರೆಟಿ ವಲಯದಲ್ಲಿ ಸ್ವಲ್ಪ ಜಾಸ್ತಿನೇ ಇದೆ.
ರಾಖಿ ಹಬ್ಬದಂದು ಸ್ಯಾಂಡಲ್‌ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯಲ್ಲೂ ಸಂಭ್ರಮ ಮನೆ ಮಾಡಿದೆ. ಹೀಗಾಗಿ ಕರ್ನಾಟಕದ ತಮ್ಮ ಅಭಿಮಾನಿಗಳಿಗೆ ಅಕ್ಕತಂಗಿಯಂದಿರಿಗೆ ದರ್ಶನ್ ರಕ್ಷಾ ಬಂಧನದ ಶುಭಾಶಯಗಳನ್ನು ತಿಳಿಸಿದ್ದಾರೆ.

ರಕ್ಷಾ ಬಂಧನದ ಈ ಶುಭ ದಿನದಂದು ಚಾಲೆಂಜಿಂಗ್ ಸ್ಟಾರ್ ಟ್ವೀಟ್ ಮಾಡಿದ್ದಾರೆ. ರಾಖಿ ಕಟ್ಟಿರುವ ಫೋಟೊವೊಂದನ್ನು ಶೇರ್ ಮಾಡಿದ್ದಾರೆ. ಇದರೊಂದಿಗೆ “ಪ್ರೀತಿಯಿಂದ ಬಂದು ಹರಸಿದ ಹಾಗೂ ಎಲ್ಲಾ ನನ್ನ ಅಕ್ಕತಂಗಿಯರಿಗೆ ರಕ್ಷಾ ಬಂಧನ ಶುಭಾಶಯಗಳು” ಎಂದು ಟ್ವೀಟ್ ಮೂಲಕ ನಾಡಿನ ಜನತೆಗೆ ರಕ್ಷಾ ಬಂಧನದ ಶುಭಾಶಯಗಳನ್ನು ಹರಿಸಿದ್ದಾರೆ. ದರ್ಶನ್ ಟ್ವೀಟ್‌ಗೆ ಕಂಡು ಅಭಿಮಾನಿಗಳು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.