ಮಾಜಿ ಮುಖ್ಯಮಂತ್ರಿ, ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳಿನಲ್ಲಿ ಮೈಲ್ಡ್ ಸ್ಟ್ರೋಕ್,,ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಂಗಳೂರು(ಆ.31.. ಮಾಜಿ ಮುಖ್ಯಮಂತ್ರಿ, ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳಿನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಅಸ್ವಸ್ಥತೆ, ಮಾತಿನ ಅಸ್ಪಷ್ಟತೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಮುಂಜಾನೆ 3:40 ರ ಸುಮಾರಿಗೆ ಆಸ್ಪತ್ರೆಗೆ ಬಂದಿದ್ದರು. ಕೂಡಲೇ ಆರೋಗ್ಯ ತಪಾಸಣೆ ನಡೆಸಿ ಐಸಿಯುಗೆ ದಾಖಲಿಸಲಾಗಿತ್ತು. ನಂತರ ನರರೋಗ ತಜ್ಞ ಡಾ.ಪಿ.ಸತೀಶ್ ಚಂದ್ರ ಮತ್ತು ಅವರ ತಂಡ ಚಿಕಿತ್ಸೆ ನೀಡಲು ಆರಂಭಿಸಿದು ಕುಮಾರಸ್ವಾಮಿಯವರಿಗೆ ಮಿದುಳಿನ ಬಲಭಾಗದಲ್ಲಿ ಮೈಲ್ಡ್ ಸ್ಟ್ರೋಕ್ ಆಗಿದು. ಚಿಕಿತ್ಸೆ ನೀಡಲಾಗುತ್ತದೆ. ಶೀಘ್ರಗತಿಯಲ್ಲಿ ಗುಣಮುಖರಾಗುತ್ತಿದ್ದಾರೆ. ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ವೇಳೆ ಪತ್ನಿ ಅನಿತಾ ಕುಮಾರಸ್ವಾಮಿ ಮಾತನಾಡಿ, ಆಸ್ಪತ್ರೆಗೆ ದಾಖಲಿಸಿದ ಕೂಡಲೇ ವೈದ್ಯರು ಎಂಆರ್‌ಐ ಮತ್ತು ಸಿಟಿ ಸ್ಕ್ಯಾನ್ ಮಾಡಿ, ಚಿಕಿತ್ಸೆ ಆರಂಭಿಸಿದರು. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಜೊತೆಗೆ ನೆಗಡಿ, ಮೈ ನೋವು, ಜ್ವರದಿಂದ ಬಳಳುತ್ತಿದ್ದಾರೆ. ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು ಎಂದು ವೈದ್ಯರು ಹೇಳಿದ್ದಾರೆ. ಪ್ಯಾನಿಕ್ ಆಗಲು ಯಾವುದೇ ಕಾರಣವಿಲ್ಲ. ಜನರು ವದಂತಿಗಳಿಗೆ ಕಿವಿಕೊಡಬಾರದು ಎಂದು ತಿಳಿಸಿದ್ದಾರೆ.

ಕುಮಾರಸ್ವಾಮಿಯವರು ಎರಡು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅಲ್ಲದೆ, ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

  • Related Posts

    ಸಮಾಜವಾದಿ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ನೇತೃತ್ವದಲ್ಲಿ ಪಕ್ಷ ಸೇರ್ಪಡೆ

    ಬೆಂಗಳೂರು, 31, ಜೂಲೈ 2025, ಆನೇಕಲ್:- ಮಹಿಳೆಯರು ಸಾಮಾಜಿಕ ಶೋಷಣೆ ಯಿಂದ ಹೊರಗಡೆ ಬಂದು ತಮ್ಮ ಮೂಲಭೂತ ಹಕ್ಕುಗಳಿಗೆ ಹೋರಾಟ ಮಾಡಬೇಕು ಎಂದು ಸಮಾಜವಾದಿ ಪಾರ್ಟಿ ರಾಜ್ಯ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಹೇಳಿದರು. ಅವರು ಬೆಂಗಳೂರು ದಕ್ಷಿಣ…

    ವಿಧಾನ ಪರಿಷತ್ ಸದ್ಯಸ ಬಿ ಕೆ ಹರಿಪ್ರಸಾದ್ ಹುಟ್ಟುಹಬ್ಬ – ಶುಭ ಕೋರಿದ ಸಮಾಜವಾದಿ ನಾಯಕರು

    ಬೆಂಗಳೂರು, ಬಿ ಕೆ ಹರಿಪ್ರಸಾದ್ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು ತಿಳಿಸಿದ ಸಮಾಜವಾದಿ ಪಾರ್ಟಿ ರಾಜ್ಯ ಅಧ್ಯಕ್ಷ ಎನ್ ಮಂಜಪ್ಪ ಮತ್ತು ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಶುಭಾಶಯಗಳು ಕೋರಿದರು ಕಳೆದ ಸುಮಾರು ವರ್ಷಗಳು ಸಾಮಾಜಿಕ ಹೋರಾಟದಲ್ಲಿ ಜನರ ಮಧ್ಯ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!