ವರಮಹಾಲಕ್ಷ್ಮಿ ಪೂಜೆ ಮತ್ತು ರಕ್ಷಾಬಂಧನದ ಅಂಗವಾಗಿ ಸಾಧಕರಿಗೆ ಸನ್ಮಾನ

ದಾವಣಗೆರೆ (ಸೆ 01) ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ನಗರದ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ವರಮಹಾಲಕ್ಷ್ಮಿ ಹಬ್ಬ ಮತ್ತು ರಕ್ಷಾಬಂಧನದ ಅಂಗವಾಗಿ ಸಾಧಕರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಕಾಂಗ್ರೆಸ್ಸಿನ ಮಹಿಳಾ ಘಟಕದ ಅಧ್ಯಕ್ಷ ಶ್ರೀಮತಿ ಅನಿತಾಬಾಯಿ ಅವರ ನೇತೃತ್ವದಲ್ಲಿ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪನವರು, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್, ಉಪ ವಿಭಾಗ ಅಧಿಕಾರಿ ಶ್ರೀಮತಿ ದುರ್ಗಾ ಶ್ರೀ, ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀಮತಿ ರೇಣುಕಾ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಧರ್ಮ ಪತ್ನಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರು ಮಹಿಳಾ ಕಾಂಗ್ರೆಸ್ಸಿನ ಎಲ್ಲಾ ಪದಾಧಿಕಾರಿಗಳನ್ನು ಸತ್ಕರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ಹಾಗೂ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!