
ದಾವಣಗೆರೆ ನಗರದ ಆನೆಕೊಂಡದಲ್ಲಿ ಸುಮಾರು 900 ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ, ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜೆಯನ್ನು ನೆರವೇರಿಸಿ ಸಾವಿರಾರು ಜನರಿಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

ಆನೆಕೊಂಡ ಗ್ರಾಮದ ಸುತ್ತ ಮುತ್ತಲಿನ ಸಾವಿರಾರು ಜನರು ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು ಪುನೀತಭಾವ ತಾಳಿದರು. ಸುಮಾರು 1120ನೆ ಇಸಿಯಲ್ಲಿ ಉಚ್ಚಂಗಿದರ್ಗದ ರಾಜರಲ್ಲಿ ಒಬ್ಬರ ರಾಜರಾದ ತ್ರಿಭುವನ ಮಲ್ಲಾಪಡ್ಯ ಎಂಬುವವರು ದೇವಸ್ಥಾವನ್ನು ನಿರ್ಮಿಸಿದ್ದಾರೆ. ದೇವಸ್ಥಾನದಲ್ಲಿ ಈಶ್ವರ ಮತ್ತು ಬಸವೇಶ್ವರ ದೇವರುಗಳನ್ನು ಪ್ರತಿಷ್ಠಾಪಿಸಲಾಗಿದೆ.

ಶ್ರಾವಣ ಮಾಸದ ನಾಲ್ಕನೇ ಸೋಮವಾರ ದೇವಸ್ಥಾನದಲ್ಲಿ ಜಾತ್ರೆಯನ್ನು ವಿಜೃಂಭಣೆಯಿಂದ ನಡೆಸಲಾಗುವುದು ಎಂದು ದೇವಸ್ಥಾನ ಸಮಿತಿಯವರು ತಿಳಿಸಿದ್ದಾರೆ.









