
ದಾವಣಗೆರೆ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿರು ಬಸವೇಶ್ವರ ದೇವಸ್ಥಾನದಲ್ಲಿ ಐದಿನೈದನೇ ಬಾರಿಗಿ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಿ, ಸಾರ್ವಜನಿಕರಿಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

ಶ್ರಾವಣ ಮಾಸದ ಮೂರನೇ ಸೋಮವಾರದ ಇಂದು ಬಸವೇಶ್ವರ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸುವುದರ ಜೊತೆಗೆ ಬೆಳಿಗ್ಗೆಯೇ ವಿಶೇಷ ಅಲಂಕಾರ ಮಾಡಲಾಗಿತ್ತು. ಸುಮಾರು ಐದು ಸಾವಿರ ಜನರಿಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸಮಿತಿಯವರು ತಿಳಿಸಿದ್ದಾರೆ.










