

ಹೆಚ್.ಡಿ.ಕೋಟೆ ತಾಲ್ಲೂಕಿನ ಆಲನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮದಲ್ಲಿ ಮಾನ್ಯ ಕಾರ್ಯನಿರ್ವಾಹ ಅಧಿಕಾರಿಗಳು ಭಾಗವಹಿಸಿ ಹಸಿ ಕಸ ಹಾಗೂ ಒಣ ಕಸ ಬೇರ್ಪಡಿಸುವುದು, ತಮ್ಮ ಮನೆ ಬಾಗಿಲಿಗೆ ಬರುವ ಸ್ವಚ್ಛತಾ ವಾಹನಕ್ಕೆ ಒಣ ಕಸ ಹಾಕುವಂತೆ ಸಾರ್ವಜನಿಕರಿಗೆ ತಿಳಿಸಿದರು.

ಈ ವೇಳೆ ಗ್ರಾ.ಪಂ ಅಧ್ಯಕ್ಷರು, ಉಪಾದ್ಯಕ್ಷರು, ಸದಸ್ಯರು, ಪಿಡಿಓ, ಸಂಜೀವಿನಿ ಸಿಬ್ಬಂದಿಗಳು,MBK ಒಕ್ಕೂಟದ ಸದಸ್ಯರು ಹಾಗೂ ತಾಲೂಕು ಐಇಸಿ ಸಂಯೋಜಕರು ಇದ್ದರು