

ಇಂದು ಬೆಳಗಾವಿಯಲ್ಲಿ ಶ್ರೀ ಸುರೇಶ್ ಅಂಗಡಿ ಶಿಕ್ಷಣ ಸಂಸ್ಥೆಯ ವತಿಯಿಂದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯ ಸ್ಮರಣಾರ್ಥವಾಗಿ ಹಮ್ಮಿಕೊಳ್ಳಲಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ದೇಶ ಕಂಡ ಸರ್ವಶ್ರೇಷ್ಠ ಗುರುವಿಗೆ ಗೌರವ ನಮನ ಸಲ್ಲಿಸಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕರಿಸುತ್ತಿರುವ ಸಮಸ್ತ ಗುರು ವೃಂದಕ್ಕೆ ಶುಭಕೋರಿದೆ.

ಈ ಸಂದರ್ಭದಲ್ಲಿ ನಿರ್ದೇಶಕರಾದ ಡಾ. ಸ್ಪೂರ್ತಿ ಅಂಗಡಿ ಪಾಟೀಲ್, ಶ್ರೀಮತಿ ಶೃದ್ಧಾ ಶೆಟ್ಟರ್, ಪ್ರಾಂಶುಪಾಲರು ಮತ್ತು ನಿರ್ದೇಶಕರಾದ ಶ್ರೀ ಆನಂದ ದೇಶಪಾಂಡೆ ಸೇರಿದಂತೆ ಇನ್ನಿತರೆ ಪ್ರಮುಖರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿಗಾರರು :-
ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….