ಆಧ್ಯಾತ್ಮಕ ಜ್ಞಾನ ಹಾಗೂ ಚಾಣಾಕ್ಷತೆಯಲ್ಲಿ ಶ್ರೀಕೃಷ್ಣನಂತೆ ಇರಬೇಕು. ದಾವಣಗೆರೆಯ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್…

ದಾವಣಗೆರೆ, ಸೆ. 6 : ಶ್ರೀ ಕೃಷ್ಣ ಪರಮಾತ್ಮನಂತೆ ಬಹುಸ್ವರೂಪಿ, ಆಧ್ಯಾತ್ಮಕ, ಭಕ್ತಿ, ಜ್ಞಾನ, ಹಾಗೂ ಚಾಣಾಕ್ಷತೆಯಲ್ಲಿ ಹೊಂದಬೇಕು. ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ತಿಳಿಸಿದರು.

ಬುಧವಾರ(ಸೆ.6) ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಯಾದವ ಸಮಾಜದವರು ವಾಸಿಸುವ 39 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿದ್ದು, ಜಗಳೂರು ತಾಲ್ಲೂಕು ಒಂದರಲ್ಲಿಯೇ 19 ಕ್ಕಿಂತ ಹೆಚ್ಚು ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಈ ಗ್ರಾಮಗಳಿಗೆ ಮಹಾಭಾರತದ ಮಹಾಕಾವ್ಯದಲ್ಲಿನ ಇರುವ ಹೆಸರುಗಳನ್ನೆ ಗ್ರಾಮಗಳಿಗೆ ಇಡಲು ಪ್ರಯತ್ನಿಸಲಾಗುತ್ತದೆ. ಇದಲ್ಲದೇ ಬಾಕಿ ಉಳಿದ ಗ್ರಾಮಗಳನ್ನೂ ಸಹ ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುತ್ತದೆ. ಯಾದವ ಸಮುದಾಯ ಸೇರಿದಂತೆ ಧ್ವನಿ ಇಲ್ಲದ ಸಮುದಾಯಗಳನ್ನು ಗಮನದಲ್ಲಿಸಿರಿ ಅವರ ಅಭಿವೃದ್ದಿಗೂ ಸಹಕರಿಒಸಲಾಗುತ್ತದೆ ಎಂದರು.

ಜಿಲ್ಲಾ ಹೆಚ್ಚುವರಿ ಪೋಲೀಸ್‍ವರಿಷ್ಠಾಧಿಕಾರಿ ರಾಮಗೊಂಡ ಬಸರಗಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣ ನಾಯ್ಕ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ನಾಗರಾಜ, ಜಿಲ್ಲಾ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪಿ. ರಮೇಶ್, ಕೌಶಲ್ಯಾಭಿವೃದ್ಧಿ ಉಪನಿರ್ದೇಶಕ ಬಸವನಗೌಡ, ಉಪಸ್ಥಿತರಿದ್ದರು.

ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!