ಮಾಯಕೊಂಡ ವಸತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸ, ಜಿಲ್ಲಾಧಿಕಾರಿ, ಸಿ.ಇ.ಒ ಭೇಟಿ ಪರಿಶೀಲನೆ.

ದಾವಣಗೆರೆ; ಸೆ.೬ : ಮಾಯಕೊಂಡದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಸತಿಯುತ ಪ್ರತಿಭಾನ್ವಿತ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ರಾತ್ರಿ ಊಟದ ನಂತರ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಸೆ.೬ ರಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಂಗಳವಾರ ರಾತ್ರಿಯ ಊಟಕ್ಕೆ ಮಾಡಲಾದ ಅನ್ನ ಸರಿಯಾಗಿ ಬೇಯಿಸದ ಕಾರಣ ಕೆಲ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿರುತ್ತದೆ. ಈ ವಿದ್ಯಾರ್ಥಿಗಳನ್ನು ತಕ್ಷಣ ಸಿ.ಜಿ ಆಸ್ಸತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿರುತ್ತದೆ. ವಿದ್ಯಾರ್ಥಿನಿಯರ ಹೆಚ್ಚು ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಯಾವುದೇ ಅಪಾಯ ಇರುವುದಿಲ್ಲ. ಮಕ್ಕಳ ಪೋಷಕರಿಗೂ ಸಹ ಮಾಹಿತಿಯನ್ನು ನೀಡಲಾಗಿದೆ.
ಜಿಲ್ಲಾಧಿಕಾರಿ ಹಾಗೂ ಸಿ.ಇ.ಒ ವಸತಿ ಶಾಲೆಯಲ್ಲಿನ ಅಡುಗೆ ಮನೆ, ಉಗ್ರಾಣ ಪರಿಶೀಲನೆ ನಡೆಸಿ ಸ್ವಚ್ಚತೆ ಕಾಪಾಡಲು ಸೂಚನೆ ನೀಡಿದರು.

ನಿರ್ಲಕ್ಷö್ಯತೆ ವಹಿಸಿದ ಈ ವಸತಿ ಶಾಲೆಯ ವಾರ್ಡನ್ ಅವರನ್ನು ತಕ್ಷಣ ಬದಲಾಯಿಸಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು. ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಾಗರಾಜ್.ಕೆ ಉಪಸ್ಥಿತರಿದ್ದರು.

ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ: ಮಾಯಕೊಂಡ ವಸತಿಯುತ ಪ್ರೌಢಶಾಲೆಯಲ್ಲಿ ಮಂಗಳವಾರ ರಾತ್ರಿ ಊಟದ ನಂತರ ೧೫ ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿನಿಯರು ಗುಣಮುಖರಾಗುತ್ತಿದ್ದು ಬುಧವಾರ ಮಾಯಕೊಂಡ ಶಾಸಕರಾದ ಕೆ.ಎಸ್ ಬಸವಂತಪ್ಪ, ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!