

ಆನೇಕಲ್ ತಾಲ್ಲೂಕು, 06/09/2023 ರಂದು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಆನೇಕಲ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆ ಮೇಲ್ವಿಚಾರಣೆಗಾಗಿ ರಚಿಸಲಾಗಿರುವ ಗ್ರಾಮ ಪಂಚಾಯತ್ ಮಟ್ಟದ ಮೇಲುಸ್ತುವಾರಿ ಸಮಿತಿಯ ಸದಸ್ಯರುಗಳಿಗೆ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ಸಮಿತಿಯ ಕರ್ತವ್ಯ ಮತ್ತು ಜವಾಬ್ದಾರಿ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ತರಬೇತಿ ಕಾರ್ಯಾಗಾರವನ್ನು ಮಾಸ್ಟರ್ ಟ್ರೈನರ್ ರಾದ ಶ್ರೀ ಸುನೀಲ್ ಎಲ್ ಸಹಾಯಕ ನಿರ್ದೇಶಕರು ಬೆಂಗಳೂರು ಪೂರ್ವ ತಾಲ್ಲೂಕು ಪಂಚಾಯತ್ , ಶ್ರಿಮತಿ ಮಾಧುರಿ ಸಿ.ಎಂ ಸಹಾಯಕ ನಿರ್ದೇಶಕರು ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯತ್ ,ಜಿಲ್ಲಾ ಸಮಾಲೋಚರು ಮತ್ತು NRLM ಸಂಯೋಜಕರು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ತಾ ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….