

ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಫೌಂಡೇಶನ್ ಮತ್ತು ಡೆಲ್ ಟೆಕ್ನಾಲಜಿಸ್ ಇವರ ಸಹಭಾಗಿತ್ವದ “ಗ್ರಾಮ ಡಿಜಿ ವಿಕಸನ“ ಕಾರ್ಯಕ್ರಮದಡಿ ಆಯ್ಕೆಯಾದ ಸುಳ್ಯ ತಾಲ್ಲೂಕಿನ 8 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ಕ್ಷೇತ್ರದ ಶಾಸಕಿಯಾದ ಕು. ಭಾಗೀರಥಿ ಮುರುಳ್ಯ ರವರು ಲ್ಯಾಪ್ ಟಾಪ್ ಹಾಗೂ ಮಾನಿಟರ್ ಗಳನ್ನು ವಿತರಿಸಿದರು.



ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಗಳ ಅಧ್ಯಕ್ಷರು , ತಾಲ್ಲೂಕು ಪಂಚಾಯತ್ ಕಾರ್ಯನಿರ್ಹಕ ಅಧಿಕಾರಿ ಶ್ರೀ ರಾಜಣ್ಣ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅರಿವು ಕೇಂದ್ರದ ಮೇಲ್ವಿಚಾರಕರು ಹಾಗೂ ತಾಲ್ಲೂಕು ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….