ದಾವಣಗೆರೆಯ ಶ್ರೀ ಸೋಮೇಶ್ವರ ವಿದ್ಯಾಲಯದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಶ್ರೀ ಕೃಷ್ಣ ಜನ್ಮಾಷ್ಠಾಮಿ..

ದಾವಣಗೆರೆ:ಸೆ.07- ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಶ್ರೀ ಸೋಮೇಶ್ವರ ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಾಮಿ ಅತ್ಯಂತ ಯಶಸ್ವಿಯಾಗಿ ನಡೆಯಿತು. ಪೋಷಕರ ಅಮೋಘ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಮುದ್ದಾದ ಮಕ್ಕಳು ರಾಧೆ ಕೃಷ್ಣನ ವೇಷದೊಂದಿಗೆ ಶಾಲೆಗೆ ಆಗಮಿಸಿ ಎಲ್ಲರ ಗಮನ ಸೆಳೆದರು.

ರಾಧೆಯಾದ ವಿದ್ಯಾರ್ಥಿನಿಯರಿಗೆ ಕೃಷ್ಣನ ಪಾತ್ರದಲ್ಲಿ ಬಂದ ವಿದ್ಯಾರ್ಥಿಗಳು ಸಾಥ್ ನೀಡಿದರು. ಶ್ರೀಕೃಷ್ಣನ ಹಲವು ಹಾಡುಗಳಿಗೆ ಹೆಜ್ಜೆ ಹಾಕುವ ಮೂಲಕ ಶ್ರೀಕೃಷ್ಣನನ್ನ ಸ್ಮರಿಸಿದರು. ಪುಟ್ಟ ಪಟಾಣಿಗಳು ಶ್ರೀಕೃಷ್ಣನಂತೆ ಕಂಗೊಳಿಸುವ ಮೂಲಕ ಶಾಲಾ ವಾತಾವರಣವೇ ಹಬ್ಬದಂತೆ ಮಾರ್ಪಟ್ಟಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇದೇ ಸಂಸ್ಥೆಯಲ್ಲಿ 15 ವರ್ಷಗಳಿಂದ ಸೇವೆ ಸಲ್ಲಿಸಿದ ಹಿರಿಯ ಶಿಕ್ಷಕಿ ಶ್ರೀಮತಿ ರೂಪರಾಣಿ ವಹಿಸಿಕೊಂಡಿದ್ದರು.

ಅತಿಥಿಗಳಾಗಿ ಪೋಷಕರಾದ ಶ್ರೀಮತಿ ಮಮತಾ ಹಾಗೂ ಶ್ರೀಮತಿ ಮಂಗಳ ಗೌರಿ ಆಗಮಿಸಿದ್ದರು. ಈ ವೇಳೆ ಸಂಸ್ಥೆಯ ಸಂಸ್ಥಾಪಕರು ಹಾಗೂ ಗೌರವ ಕಾರ್ಯದಶಿಗಳಾದ ಕೆ.ಎಂ ಸುರೇಶ್, ಪ್ರಾಂಶುಪಾಲರಾದ ಶ್ರೀಮತಿ ಪ್ರಭಾವತಿ, ಆಡಳಿತಾಧಿಕಾರಿ ಹರೀಶ್ ಬಾಬು, ಮುಖ್ಯೋಪಧ್ಯಾಯರಾದ ಪ್ರಕಾಶ್, ಶ್ರೀಮತಿ ಗಾಯತ್ರಿ, ಶ್ರೀಮತಿ ಮಾಲಾ ಸೇರಿದಂತೆ ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!