

ಅಥಣಿ : ಬನಹಟ್ಟಿಯ ಶ್ರೀ ತಮ್ಮಣ್ಣಪ್ಪಾ ಚಿಕ್ಕೋಡಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ದಿ. 07-09-2023ರಂದು ಜರುಗಿದ ಕಲಾ ಪರಂಪರೆ ಹಾಗೂ ಬಿಳ್ಕೋಡುಗೆ ಸಮಾರಂಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳು , ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರ ಪುತ್ರರು, ಕಾಂಗ್ರೆಸ್ ಪಕ್ಷದ ಯುವ ನಾಯಕರಾದ ಶ್ರೀ ಚಿದಾನಂದ ಲ. ಸವದಿಯವರು ಪಾಲ್ಗೊಂಡು ಮಾತನಾಡಿದರು.
ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ ಘಟ್ಟ. ಈ ಸಮಯದಲ್ಲಿ ಕಾಲಹರಣ ಮಾಡದೇ ವಿದ್ಯಾರ್ಥಿಗಳು ಶ್ರಮವಹಿಸಿ ವಿದ್ಯಾಭ್ಯಾಸ ಮಾಡಬೇಕು. ತಮ್ಮ ಸಾಧನೆ ಮೂಲಕ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಬೇಕು. ಉನ್ನತ ಸ್ಥಾನ ಮಾನಗಳನ್ನು ಪಡೆಯುವ ಮೂಲಕ ನಿಮಗೆ ಶಿಕ್ಷಣ ಕಲಿಸಿದ ಶಿಕ್ಷಕರು, ತಂದೆ-ತಾಯಿ ಹಾಗೂ ನಿಮ್ಮ ಊರಿನ ಕೀರ್ತಿ ಹೆಚ್ಚಿಸಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ, ಶ್ರೀ ಸಿದ್ದು ಕೊಣ್ಣೂರ, ಶ್ರೀ ಶಿವಾನಂದ ಗುಡ್ಡಾಪುರ, ಶ್ರೀ ಸುರೇಶಗೌಡ ಪಾಟೀಲ ಸೇರಿದಂತೆ ಹಲವು ಗಣ್ಯಮಾನ್ಯರು, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….