

ಚಿಕ್ಕಮಗಳೂರು, ಗಣೇಶ ಚತುರ್ಥಿ ಮತ್ತು ಈದ್-ಮಿಲಾದ್ ಹಬ್ಬಗಳ ಅಂಗವಾಗಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಲಿರುವ ಆಯೋಜಕರು, ಮುಖಂಡರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.
ಆಯೋಜಕರು ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡು, ಪರಿಸರ ಸ್ನೇಹಿ ವಿಗ್ರಹಗಳನ್ನು ಪ್ರತಿಪ್ಠಾಪಿಸಲು, ಸ್ವಯಂಸೇವಕರನ್ನು ನೇಮಿಸಿಕೊಳ್ಳಲು, ಇಲಾಖೆಗಳಿಂದ ಅನುಮತಿ ಪಡೆದುಕೊಳ್ಳಲು, ಪೆಂಡಾಲ್ ಸುರಕ್ಷತೆ ಮತ್ತು ಸಿಸಿ ಟಿವಿ ಕ್ಯಾಮರ ಅಳವಡಿಕೆ, ಏಕಗವಾಕ್ಷಿ ವ್ಯವಸ್ಥೆ ಹಾಗೂ ಮೆರವಣಿಗಳನ್ನು ಶಾಂತಿಯುತವಾಗಿ ನಡೆಸಲು ಸೂಚನೆಗಳನ್ನು ನೀಡಲಾಯಿತು.

ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಗಣೇಶ ಚತುರ್ಥಿ ಮತ್ತು ಈದ್-ಮಿಲಾದ ಹಬ್ಬಗಳನ್ನು ಜಿಲ್ಲೆಯಲ್ಲಿ ಶಾಂತಯುತವಾಗಿ ನಡೆಸಲು ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿದ್ದ ಎಲ್ಲಾ ಅಧಿಕಾರಿಗಳಿಗೆ ಸೂಚನೆಗಳನ್ನು ಸಹ ನೀಡಲಾಯಿತು.
ಸಭೆಯಲ್ಲಿ ಮಾನ್ಯ ಅಧ್ಯಕ್ಷರು, ನಗರ ಸಭೆ; ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸೇರಿದಂತೆ ಪೊಲೀಸ್, ಕಂದಾಯ, ಅಗ್ನಿಶಾಮಕ, ಅಬಕಾರಿ, ಅರಣ್ಯ, ಮಾಲಿನ್ಯ ನಿಯಂತ್ರಣ ಮಂಡಳಿ, ನಗರ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….