

ಕೊಪ್ಪಳ ಸೆಪ್ಟೆಂಬರ್ 08 : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಗೂ ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮೇಣಧಾಳ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ “ಪೌಷ್ಠಕ ಆಹಾರ ಸಪ್ತಾಹ” ಕಾರ್ಯಕ್ರಮವನ್ನು ಸೆಪ್ಟೆಂಬರ್ 07ರಂದು ನಡೆಯಿತು.
ಜಿಲ್ಲಾ ಅರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ವಿ.ಪಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸೆಪ್ಟೆಂಬರ್ ತಿಂಗಳ ಮೊದಲನೇ ವಾರದಲ್ಲಿ “ಪೌಷ್ಠಕ ಆಹಾರ ಸಪ್ತಾಹ” ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. “ಪೌಷ್ಠಿಕ ಆಹಾರ ಸೇವಿಸಿ ರಕ್ತ ಹೀನತೆ ತಡೆಗಟ್ಟಿ” ಎಂಬುವುದು ಈ ವರ್ಷದ ಘೋಷವಾಕ್ಯವಾಗಿದೆ. ಗರ್ಭೀಣಿಯರು, ಹಾಲುಣಿಸುವ ತಾಯಂದಿರು, 5 ವರ್ಷದೊಳಗಿನ ಮಕ್ಕಳಲ್ಲಿ ಹಾಗೂ ಹದಿ-ಹರೆಯದವರಲ್ಲಿ ಉಂಟಾಗುವ ಅಪೌಷ್ಠಿಕತೆಯನ್ನು ಹೊಗಲಾಡಿಸುವ ನಿಟ್ಟಿನಲ್ಲಿ ಪೌಷ್ಠಿಕ ಆಹಾರ ಸೇವನೆಯ ಕುರಿತು ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಅಪೌಷ್ಠಿಕತೆಯಿಂದ ಉಂಟಾಗುವ ತೊಂದರೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮಕ್ಕೆ 2018ರ ಮಾರ್ಚ್ 8 ರಂದು ಪ್ರಧಾನಮಂತ್ರಿಗಳು ರಾಜಸ್ಥಾನದ ರಾಜ್ಯದಲ್ಲಿ ಚಾಲನೆ ನೀಡಿದರು. ಅಂದಿನಿಂದ ಇವತ್ತಿನ ವರೆಗೆ ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.
ಭಾರತ ಹಳ್ಳಿಗಳ ದೇಶ, ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ. ಪ್ರತಿಯೊಬ್ಬ ಗರ್ಭಿಣಿ ಬಾಣಂತಿಯರು, ಹಾಲುಣಿಸುವ ತಾಯೆಂದಿರು, ಹದಿ-ಹರೆಯದವರು ಹಾಗೂ ವಿಶೇಷವಾಗಿ 05 ವರ್ಷದೊಳಗಿನ ಮಕ್ಕಳಲ್ಲಿ ರಕ್ತ ಹೀನತೆಯನ್ನು ತಡೆಗಟ್ಟಲು ಪೌಷ್ಠಿಕ ಆಹಾರ ಅವಶ್ಯಕತೆ ಇರುತ್ತದೆ. ಪ್ರತಿ ದಿನ ಸೇವಿಸುವ ಆಹಾರದಲ್ಲಿ ಕಾರ್ಬೋಹೈಡ್ರೆಟ್ಸ್, ಪ್ರೋಟಿನ್, ಕೊಬ್ಬು, ವಿಟಾಮಿನ್ಸ್ ಮತ್ತು ಮಿನರಲ್ಸ್ ಎಲ್ಲಾ ಬಗೆಯ ಸೊಪ್ಪು ಮತ್ತು ಹಸಿರು ತರಕಾರಿಗಳು, ಹಣ್ಣುಗಳು ಮತ್ತು ಹಾಲಿನ ಉತ್ಪಣಗಳು, ಮೊಟ್ಟೆ, ಮೀನು ಮತ್ತು ಮುಂತಾದ ಆಹಾರ ಪದಾರ್ಥಗಳನ್ನು ಸೇವಿಸಬೇಕು. ಗರ್ಭಿಣಿಯರು, ಹದಿ-ಹರೆಯದವರು ಪೌಷ್ಠಿಕ ಆಹಾರ ಸೇವಿಸುವುದರ ಜೊತೆಗೆ ಕಬ್ಬಿಣಾಂಶ ಮಾತ್ರೆ ತೆಗೆದುಕೊಳ್ಳಬೇಕು. ಶುದ್ಧವಾದ ನೀರು ಕುಡಿಯುವುದು, ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಮನೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ತಾವರಗೇರಾ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ಶಂಕ್ರಮ್ಮ ಅವರು ಆಯೋಡಿಯುಕ್ತ ಉಪ್ಪು, ಮೊಳೆಕೆ ಬರಿಸಿದ ಕಾಳು, ಎಲ್ಲಾ ಬಗೆಯ ಹಸಿರು ಸೊಪ್ಪು, ಮೊಟ್ಟೆ ದಿನನಿತ್ಯದ ಆಹಾರದಲ್ಲಿ ಬಳಸುವಂತೆ ಗರ್ಭೀಣಿಯರಿಗೆ ತಿಳಸಿದರು. ಬಳಿಕ ಲಸಿಕಾ ಕಾರ್ಯಕ್ರಮ ಹಾಗೂ ಕುಟುಂಬ ಕಲ್ಯಾಣ ಕಾರ್ಯಕ್ರಮದ ತಾತ್ಕಾಲಿಕ ಮತ್ತು ಶಾಶ್ವತ ವಿಧಾನಗಳ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಯು.ಹೆಚ್.ಸಿ ಜಿಲ್ಲಾ ಸಲಹೆಗಾರರಾದ ಬಸಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶಿವಲಿಲಾ, ಪಿ.ಹೆಚ್.ಸಿ.ಒ ಮಂಜುಳಾ, ಹೆಚ್.ಐ.ಒ ಅನ್ವರಸಾಬ್, ಸಿ.ಹೆಚ್.ಒ ರಮೇಶ, ಆನಂದ, ಅಕ್ವೀಲ್, ಆಶಾ ಕಾರ್ಯಕರ್ತೆಯರಾದ ಶ್ಯಾಮಾಲಾ, ಅನುಸುಯಾ, ಅಂಗನವಾಡಿ ಕಾರ್ಯಕರ್ತೆಯರು, ಗರ್ಭೀಣಿಯರು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….