

ಧಾರವಾಡ ಸೆ.08: ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯ ಸ್ವಾಮಿ ಅವರು ಸೆಪ್ಟೆಂಬರ್ 9 ರಂದು ಧಾರವಾಡ ಜಿಲ್ಲೆಗೆ ಆಗಮಿಸುವರು.
ಸೆಪ್ಟಂಬರ್ 9 ರಂದು ಬೆಳಿಗ್ಗೆ 11-50 ಗಂಟೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿಮೇಳ ಉದ್ಘಾಟನೆ ಕಾರ್ಯಕ್ರಮ ಹಾಗೂ ಕೃಷಿ ಮೇಳದ ವಿವಿಧ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳ ಜೊತೆ ಭಾಗವಹಿಸುವರು.
ಮಧ್ಯಾಹ್ನ 3 ಗಂಟೆಗೆ ಕೃಷಿ ವಿಶ್ವವಿದ್ಯಾಲಯದಿಂದ ರಸ್ತೆ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ ಮಧ್ಯಾಹ್ನ 3-30 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….