

ಧಾರವಾಡ ಸೆ.8 : ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಇಂದು (ಸೆ.8) ಸಂಜೆ ಶ್ರೀ ವಿಶ್ವಕರ್ಮ ಜಯಂತಿಯ ಆಚರಣೆ ಕುರಿತು ಅಪರ ಜಿಲ್ಲಾಧಿಕಾರಿ ಗೀತ ಸಿ.ಡಿ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.
ಜಯಂತಿಯನ್ನು ಆಲೂರು ವೆಂಕಟರಾವ್ ಭವನದಲ್ಲಿ ಸೆ.17 ರಂದು ಬೆಳಿಗ್ಗೆ 11 ಗಂಟೆಗೆ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಇದ್ದರು. ಸಭೆಯಲ್ಲಿ ಜಿಲ್ಲಾ ವಿಶ್ವಕರ್ಮ ಸಮುದಾಯದ ಅಧ್ಯಕ್ಷ ಕಳಪ್ಪ ಬಡಿಗೇರ ಮತ್ತು ಸಮುದಾಯದ ಮುಖಂಡರಾದ ಶಿವಣ್ಣ ಬಡಿಗೇರ, ವಸಂತ ಅರ್ಕಚಾರ, ವಿ.ವಿ.ಬಡಿಗೇರ, ವಿಠ್ಠಲ ಕಮ್ಮಾರ, ಎಂ.ಬಿ.ಬಡಿಗೇರ ಅವರು ಉಪಸ್ಥಿತರಿದ್ದರು.
ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….