“ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ” ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮ

ದಾವಣಗೆರೆ ನಗರದ ಕಸ್ತೂರಬಾ ಪದವಿ ಪೂರ್ವ ಕಾಲೇಜಿನ್ನಲ್ಲಿಂದು ಎನ್ ಎಸ್ ಎಸ್ ಘಟಕ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ದಾವಣಗೆರೆ ಇವರ ಸಂಯುಕ್ತ ಆಶ್ರಯದಲ್ಲಿ “ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ” ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ದಾವಣಗೆರೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶ್ ನ ಜಿಲ್ಲಾ ಸಲಹೆಗಾರರಾದ ಶ್ರೀ ಸತೀಶ್ ರವರು ತಂಬಾಕಿನಿಂದ ತಯಾರಿಸುವ ಬೀಡಿ,ಸಿಗರೇಟು, ಗುಟ್ಕಾ ಮೊದಲಾದುವುಗಳ ಸೇವನೆಯಿಂದ ಮಾನವ ಕ್ಯಾನ್ಸರ್ ನಂತಹ ಮಾರಕ ಖಾಯಿಲೆಗೊಳಗಾಗುತಿದ್ದಾನೆ. ಅದರಲ್ಲಿಯೂ ನಮ್ಮ ದೇಶದಲ್ಲಿ ಇಂದು ಹದಿನೈದು ವರ್ಷದಿಂದ ಹದಿನೆಂಟು ವರ್ಷದೊಳಗಿನ ಶೇಕಡಾ 22 ರಷ್ಟು ಯುವ ಪೀಳಿಗೆಯೇ ತಂಬಾಕು ಸೇವನೆಗೆ ಒಳಗಾಗುತ್ತಿರುವುದು ಆಂತಕದ ವಿಷಯವಾಗಿದೆ. ಹೆಚ್ಚಿನ ಯುವಕರು ತಂಬಾಕು ಸೇವನೆಯಿಂದ ಕ್ಯಾನ್ಸರ್ ಮಾತ್ರವಲ್ಲದೆ ಮಾನಸಿಕ ಖಿನ್ನತೆ ಮತ್ತು ಮೆದುಳು ಸಂಬಂಧಿ ಖಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ಆದುದರಿಂದ ಯುವಕರು ಮತ್ತು ಎನ್ ಎಸ್ ಎಸ್ ವಿದ್ಯಾರ್ಥಿಗಳಾದ ನೀವುಗಳೆಲ್ಲರೂ ತಂಬಾಕು ಸೇವನೆಯಿಂದ ದೂರವಿರುವುದರ ಜೊತೆಗೆ ನಿಮ್ಮ ಕುಟುಂಬದ ಹಿರಿಯರು ಮತ್ತು ಸಮಾಜದಲ್ಲಿ ತಂಬಾಕು ಸೇವನೆ ಮಾಡುವ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಕರೆನೀಡಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲು ಆಗಮಿಸಿದ ಸಾಮಾಜಿಕ ಕಾರ್ಯಕರ್ತ ಶ್ರೀ ದೇವರಾಜ್ ರವರು ಕೆಲವು ಯುವಕರು ಕುತೂಹಲಕ್ಕೆ ಇನ್ನೂ ಕೆಲವು ಯುವಕರು ಸ್ನೇಹಿತರ ಸಹವಾಸದಿಂದ ‌ಸಿಗರೇಟು, ಗುಟ್ಕಾವನ್ನು ಸೇವನೆ ಮಾಡುವ ಮೂಲಕ ಕ್ರಮೇಣ ಅವರಲ್ಲಿ ಚಟವಾಗಿ ಪರಿಣಮಿಸಿ ತಂಬಾಕು ವ್ಯಸನಿಗಳಾಗುತ್ತಾರೆ ಎಂದು ಎಚ್ಚರಿಕೆ ನುಡಿಗಳನ್ನಾಡುವುದರ ಜೊತೆಗೆ ಇದರಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಹೇಗೆ ಕ್ಯಾನ್ಸರ್ ನಂತಹ ಖಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ ಎಂಬುದನ್ನು ಕಿರು ಚಿತ್ರವನ್ನು ಪ್ರದರ್ಶನ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ಸಮಾಜಶಾಸ್ತ್ರ ಉಪನ್ಯಾಸಕರಾದ ಶ್ರೀ ವೀರಪ್ಪನವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಎಸ್ ಜಿ ನಾಗರಾಜ್ ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!