

ಜಗಳೂರು: ಕೇಂದ್ರ ಮತ್ತು ರಾಜ್ಯ ಸರಕಾರಗಳ ಸೇವೆಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಒಂದೇ ಸೂರಿನಡಿ ತರುವ ನಿಟ್ಟಿನಲ್ಲಿ ಕರ್ನಾಟಕ ಅಂಚೆ ಇಲಾಖೆ ಮುಂದಾಗಿದೆ. ಇದರ ಭಾಗವಾಗಿ ಪಟ್ಟಣದ ಅಂಚೆ ಕಚೇರಿಯಲ್ಲಿ ಜನ ಸಂಪರ್ಕ ಅಭಿಯಾನ ಕಾರ್ಯಕ್ರಮಕ್ಕೆ ಸೆ.12 ಮಂಗಳವಾರ ಅಂಚೆ ಕಚೇರಿ ಆವರಣದಲ್ಲಿ ಚಾಲನೆ ದೊರೆಯಲಿದೆ. ಜಿಲ್ಲಾ ಅಂಚೆ ಅಧೀಕ್ಷಕ ಚಂದ್ರಶೇಖರ್ ಮತ್ತು ಜಗಳೂರು ಪೋಸ್ಟ್ ಮಾಸ್ಟರ್ ಎ.ಕೆ.ಬಸಪ್ಪ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಈ ಅಭಿಯಾನದಲ್ಲಿ ಇಲಾಖೆಯ ವಿವಿಧ ಉಳಿತಾಯ ಯೋಜನೆಗಳು ಮತ್ತು ಅಂಚೆ ಜೀವ ವಿಮಾ ಸೌಲಭ್ಯಗಳು, ಅಪಘಾತ ವಿಮಾ ಯೋಜನೆಗಳ ಮಾಹಿತಿ ಮತ್ತು ಪಿಐಎಲ್, ಆರ್‌ಪಿಎಲ್‌ಐ, ಎಸ್‌ಬಿ, ಆರ್‌ಡಿ, ಎಂಎಸ್‌ಎಸ್‌ಸಿ ಖಾತೆ ಮತ್ತು ಐಪಿಪಿಬಿ ಖಾತೆಗಳ ತೆರೆಯುವಿಕೆ, ಆಧಾರ್ ಸೀಡಿಂಗ್ ಅಂಚೆ ಕಚೇರಿಯ ಎಲ್ಲ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗಲಿದೆ.

ಉಳಿತಾಯ ಯೋಜನೆಗಳನ್ನು (ಉಳಿತಾಯ ಬ್ಯಾಂಕ್ ಖಾತೆ, ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ, ಸಾರ್ವಜನಿಕ ಭವಿಷ್ಯ ನಿಧಿ), ಅಂಚೆ ಜೀವ ವಿಮಾ ಸೇವೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗಲಿದೆ.
ಕಾರ್ಯಕ್ರಮಕ್ಕೆ ಮುಖ್ಯಅತಿಥಿಗಳಾಗಿ ಗ್ರೇಡ್2 ತಹಸೀಲ್ದಾರ್ ಮಂಜಾನಂದ, ತಾಪಂ ಇಓ ಚಂದ್ರಶೇಖರ್, ಇನ್‌ಸ್ಪೆಕ್ಟರ್ ಎಂ.ಶ್ರೀನಿವಾಸ್‌ರಾವ್, ಬಿಇಓ ಹಾಲಮೂರ್ತಿ, ಕೃಷಿ ಇಲಾಖೆ ಎಡಿಎ ಮಿಥುನ್ ಕಿಮಾವತ್ ಸೇರದಂತೆ ಅನೇಕ ಅಧಿಕಾರಿಗಳು ಭಾಗವಹಿಸಲಿದ್ದಾರೆ.