

ದಾವಣಗೆರೆ: ಸರ್ಕಾರದ ವೈವಿಧ್ಯಮಯ ಕಾರ್ಯಕ್ರಮಗಳ ಅನುಷ್ಠಾನಗಳಿಂದಾಗಿ ಸರ್ಕಾರಿ ಶಾಲೆಗಳ ಮಕ್ಕಳ ಮನೋವಿಕಾಸ ವಿಶಾಲವಾಗುತ್ತಿದೆ. ಶಾಲೆಯ ಶಿಕ್ಷಕರು, ಮಕ್ಕಳು ಮತ್ತು ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳೆಲ್ಲರ ಕ್ರಿಯಾಶೀಲ ಪಾಲ್ಗೊಳ್ಳುವಿಕೆಯಿಂದ ಶಾಲೆಗಳು ಅಭಿವದ್ಧಿಯತ್ತ ಸಾಗುತ್ತಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಕೊಟ್ರೇಶ್ ಹೇಳಿದರು.

.ನಗರದ ಮೋತಿ ವೀರಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ಆವರಣದಲ್ಲಿ ನಡೆದ ಸಸ್ಯಶ್ಯಾಮಲಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಸರ್ಕಾರದ ಮಹತ್ವದ ಯೋಜನೆಯಾದ ‘ಸಸ್ಯಶ್ಯಾಮಲ’ ಕೂಡ ಪರಸ್ಪರರ ಪಾಲ್ಗೊಳ್ಳುವಿಕೆಯಿಂದ ಶಾಲಾ ಆವರಣವನ್ನು ಹಸಿರುಮಯ ಮಾಡಲು ಮತ್ತು ಆ ಮೂಲಕ ಸಮಾಜಕ್ಕೆ ಋಣ ಸಂದಾಯವನ್ನೂ ಮಾಡಬೇಕಿದೆ. ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಕ್ರಿಯಾಶೀಲವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.

ದಾವಣಗೆರೆ ಉತ್ತರ ವಲಯದ ಕ್ಷೇತ್ರಶಿಕ್ಷಣಾಧಿಕಾರಿಗಳಾದ ಪುಷ್ಪಲತಾ, ಶಾಲಾಭಿವೃದ್ಧಿ ಸಮಿತಿಯ ಪವನಜಯ, ರೇವಣಸಿದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು. ಉಪಪ್ರಾಂಶುಪಾಲರಾದ ಕಲ್ಪಿತರಾಣಿ ಸ್ವಾಗತಿಸಿದರು, ಹಿರಿಯ ಶಿಕ್ಷಕ ಮಹದೇವಪ್ಪ ಕಾರ್ಯಕ್ರಮವನ್ನು ನಿರೂಪಿಸಿದರು.