ಹುಬ್ಬಳ್ಳಿ ನೈರುತ್ಯ ರೈಲ್ವೆ ಕಛೇರಿಗೆ ಭೇಟಿ ನೀಡಿದ ಜಗದೀಶ್ ಶೇಟರ್,, ಹುಬ್ಬಳ್ಳಿ ಅಂಕೋಲಾ ಹೊಸ ರೈಲ್ವೆ ಮಾರ್ಗದ ಬಗ್ಗೆ ರೈಲ್ವೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ….

.

ಹುಬ್ಬಳ್ಳಿ ಅಂಕೋಲಾ ಹೊಸ ರೈಲ್ವೆ ಮಾರ್ಗದ ಅನುಷ್ಠಾನ ಮತ್ತು ಕಾನೂನು ಹಾಗೂ ಪರಿಸರ ತೊಡಕುಗಳಿಂದ ಅಡತಡೆ ಉಂಟಾಗಿತ್ತು. ಇತ್ತೀಚಿಗೆ ಹೈಕೊರ್ಟ್ ನಲ್ಲಿ ದಾಖಲಾಗಿದ್ದ ಸಾರ್ವಜನಿಕ ರಿಟ್ ಅರ್ಜಿಗಳು ನಿಕಾಲೆ (ಡಿಸ್ಪೋಸಲ್) ಆದ ಮೇಲೆ ಈಗ ಆ ಯೋಜನೆಗೆ ತೀವ್ರಗತಿಯಿಂದ ಚಾಲನೆ ದೊರೆತಿದೆ. ಅದಕ್ಕಾಗಿ ಇದರ ಬಗ್ಗೆ ಆದಷ್ಟು ಬೇಗನೆ ಸರ್ವೇ ಮತ್ತು ಕಾಮಗಾರಿ ಚಾಲನೆಗೆ ಬೇಕಾದ ವರದಿ ತಯಾರಿಸುವುದು. ಆದಷ್ಟು ಬೇಗನೆ ತೀವ್ರಗತಿ ಪ್ರಯತ್ನ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

ಹುಬ್ಬಳ್ಳಿ ಅಂಕೋಲಾ ಹೊಸ ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿಯನ್ನು ಅತೀ ಶೀರ್ಘದಲ್ಲಿ ಪ್ರಾರಂಭಿಸಲು ಯೋಜಿಸಿದೆ. ನ್ಯಾಷನಲ್ ಬೋರ್ಡ್ ಆಫ್ ವೈಲ್ಡ್ ಲೈಫ್ ನಿರ್ದೇಶನದ ಮೇರೆಗೆ ಫೋರ್-ವೇ (4 ವೇ-ಮಾರ್ಗ) ರೈಲ್ವೆ ಮಾರ್ಗದ ಯೋಜನೆಗೆ ಮತ್ತು ಇಂಟಿಗ್ರೇಟೆಡ್ ಟ್ರಾನ್ಫೋರ್ಟ್ (ರೋಡ್, ರೇಲ್ & ಬಂದರು ) ಪ್ರಾಜೆಕ್ಟ್ ತಯಾರಿಸಲು ಸರ್ವೇ ಪ್ರಾರಂಭವಾಗಿದೆ. ಸರ್ವೇ ಮುಗಿದ ತಕ್ಷಣ ಸರ್ವೇ ರಿಪೋರ್ಟ್ ನ್ನು ನ್ಯಾಷನಲ್ ಬೋರ್ಡ್ ಆಫ್ ವೈಲ್ಡ್ ಲೈಫ್ಗೆ ಸಲ್ಲಿಸಲಾಗುವುದು. ಬೋರ್ಡ್ ನವರ ಒಪ್ಪಿಗೆ ದೊರೆತ ನಂತರ ಮುಂದಿನ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಬೇಕಾದ ಸಹಕಾರವನ್ನು ಕೊಡಿಸಲು ಭರವಸೆಯನ್ನು ನೀಡಿ. ಕಾನೂನು ಮತ್ತು ಪರಿಸರ ಸಂಬಂಧಿಸಿದ ವಿಷಯಗಳ ಕುರಿತು ಹುಬ್ಬಳ್ಳಿ ನೈರುತ್ಯ ರೈಲ್ವೆಯ ಜನರಲ್ ಮ್ಯಾನೆಜರ್ ಸಂಜೀವ ಕಿಶೋರ ಮತ್ತು ಪರಿಸರ ಅಧಿಕಾರಿ ಅಜಯಸಿಂಗ್ ಅವರಿಂದ ಸಮಗ್ರ ಮಾಹಿತಿ ಪಡೆಯಲಾಯಿತು.

ಈ ಸಂದರ್ಭದಲ್ಲಿ ನೈರುತ್ಯ ರೈಲ್ವೆಯ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.

  • Related Posts

    ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ದಿಢೀರ್ ಭೇಟಿ;

    ಜಿಲ್ಲೆಯ ಪ್ರತಿ ಆರ್.ಎಸ್ ಕೆ.ದಲ್ಲಿ ರೈತರ ಬೇಡಿಕೆ ವಹಿ ಮತ್ತು ರೈತರ ಕುಂದುಕೊರತೆ ವಹಿ ನಿರ್ವಹಿಸಲು ನಿರ್ದೇಶನ ನೀಡಿದ ಡಿಸಿ. ಧಾರವಾಡ ಜ.31: ಇಂದು ಬೆಳಿಗ್ಗೆ ನಗರದ ಗಾಂಧಿ ಭವನ ಕಾಮಗಾರಿ ವೀಕ್ಷಣೆಗೆ ತರಳಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಗಾಂಧಿ…

    ಹುಬ್ಬಳ್ಳಿಯ ಹೆಸ್ಕಾಂ ಮುಖ್ಯ ಕಚೇರಿಯಲ್ಲಿ ಕಲಘಟಗಿ ಕ್ಷೇತ್ರದ ವಿದ್ಯುತ್‌ ಸಮಸ್ಯೆಗಳ ಬಗ್ಗೆ ಸಭೆ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!