

ಚಿತ್ರದುರ್ಗ ಸೆ.15 : ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಸ್ವಚ್ಛತಾ ಹೀ ಸೇವಾ ಆಂದೋಲನದ ಪ್ರಯುಕ್ತ ಸೆ.15 ರಿಂದ ಅ.2 ರವರೆಗೆ “garbage free india” ಹೆಸರಿನಲ್ಲಿ ಗ್ರಾಮ, ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಸ್ವಚ್ಛತಾ ಶ್ರಮದಾನ ಹಮ್ಮಿಕೊಳ್ಳಲಾಗಿದ್ದು, ಗುರುವಾರ ಚಿತ್ರದುರ್ಗ ತಾಲ್ಲೂಕಿನ ಮೆದೇಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜಿಲ್ಲಾಮಟ್ಟದ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎನ್.ಸತೀಶ್ ರೆಡ್ಡಿ ಚಾಲನೆ ನೀಡಿದರು.
ಚಿತ್ರದುರ್ಗ ಮೆದೇಹಳ್ಳಿ ರಾಷ್ಟ್ರೀಯ ಹೆದ್ದಾರಿ-4ರ ಸರ್ವಿಸ್ ರಸ್ತೆಯ ಸಮೀಪ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಂತರ ಅಂಗಡಿಗಳು, ಹೋಟೆಲ್, ವಾಣಿಜ್ಯ ಮಳಿಗೆಗಳಿಗೆ ಭೇಟಿ ನೀಡಿ, ಏಕ ಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಯಿತು. ಹಾಗೂ ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ವಚ್ಛ ಭಾರತ್ ಮಿಷನ್ ಸಮಾಲೋಚಕರು, ಜಲ ಜೀವನ್ ಮಿಷನ್ ಡಿಪಿಎಂ ಹಾಗೂ ಸಾರ್ವಜನಿಕರು ಇದ್ದರು.
ಮಹೇಶ್ ಮ್ ಶರ್ಮಾ
ಉತ್ತರ ಕರ್ನಾಟಕದ ವಿಶೇಷ ವರದಿಗಾರು