

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಕಾಂತರಾಜು ಪಿ.ಎಸ್ IAS ರವರ ನೇತೃತ್ವದಲ್ಲಿ ಸ್ವಚ್ಚತಾ ಹಿ ಸೇವಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಉದ್ಘಾಟನೆ ಕಾರ್ಯಕ್ರಮ ಜರುಗಿತು ಈ ಸಮಯದಲ್ಲಿ ಶ್ರಮದಾನ, ಪ್ರತಿಜ್ಞಾ ವಿಧಿ ಬೋಧನೆ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಹಾಗೂ SBMG Nodal Officer ಶ್ರೀಮತಿ ಅನಿತಾ, ಮುಖ್ಯ ಯೋಜನಾಧಿಕಾರಿಗಳು , ಮುಖ್ಯ ಲೆಕ್ಕಾಧಿಕಾರಿಗಳು ಹಾಗೂ ಬೆಂಗಳೂರು ದಕ್ಷಿಣ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು WASH ಸಮಾಲೋಚಕರು ಮತ್ತು ಸಿಬ್ಬಂದಿಗಳು ಹಾಜರಿದ್ದರು.



ಇದೇ ರೀತಿ ಜಿಲ್ಲೆಯ 86 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮದ ಉದ್ಘಾಟನೆ, ಶ್ರಮದಾನ, ಪ್ರತಿಜ್ಞಾ ವಿಧಿ, ಮತ್ತು ಸಂಪೂರ್ಣ 15 ದಿನ ಆಚರಿಸುವ ಕಾರ್ಯಕ್ರಮಗಳ ಮಹತ್ವ ಮತ್ತು ಕಾರ್ಯಸೂಚಿಯನ್ನು ತಿಳಿಸಿ ಪಾಲ್ಗೊಳ್ಳುವಂತೆ ಚುನಾಯಿತ ಪ್ರತನಿಧಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಲಾಯಿತು.
ಕಾರ್ಯ್ರಮದಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮಾನ್ಯ ಅದ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಲ್ಲಿ, ಕಾರ್ಯದರ್ಶಿಯವರು, ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಭಾಗವಹಿಸಿದ್ದರು.
ಮಹೇಶ್ ಮ್ ಶರ್ಮ
ಉತ್ತರ ಕರ್ನಾಟಕದ ವಿಶೇಷ ವರದಿಗಾರರು