


ಅಥಣಿ : ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರು ದಿ. 16-09-2023ರಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 10.00 ಗಂಟೆಗೆ ಸಾರ್ವಜನಿಕರ ವಿವಿಧ ಅಹವಾಲು, ಕುಂದು ಕೊರತೆಗಳನ್ನು ಆಲಿಸಿ, ವಿವಿಧ ಮನವಿಗಳನ್ನು ಸ್ವೀಕರಿಸಿದರು.



ಸಂಬಂಧಪಟ್ಟವರೊಂದಿಗೆ ಸ್ಥಳದಲ್ಲೇ ಮಾತನಾಡಿ ಹಲವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದರು. ವಿವಿಧ ಸಾರ್ವಜನಿಕರ ಬೇಡಿಕೆ ಈಡೇರಿಕೆಗೆ ಹಾಗೂ ಸಮಸ್ಯೆಗಳ ಇತ್ಯರ್ಥಗೊಳಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರನ್ನು ವಿವಿಧ ಗ್ರಾಮಸ್ಥರು, ಮುಖಂಡರು, ಅಭಿಮಾನಿಗಳು ಸನ್ಮಾನಿಸಿ , ಗೌರವಿಸಿದರು.