

ದಾವಣಗೆರೆ; ಸೆ.16 : ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಶ್ರೀ ಲಾಲ್ ಬಹುದ್ದೂರ್ ಶಾಸ್ತ್ರೀ ಜಯಂತಿಯನ್ನು ಅ.2ರಂದು ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.
ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಕ್ಟೋಬರ್ 2 ರಂದು ನಡೆಯಲಿರುವ ಗಾಂಧೀ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅ.2 ರಂದು ನಗರದ ಗಾಂಧೀ ಭವನದಲ್ಲಿ ಬೆಳಗ್ಗೆ 10.30 ಗಂಟೆಗೆ ರಾಷ್ಟ್ರಪಿತ ಮಹತ್ಮಾ ಗಾಂಧೀಜಿ ಹಾಗೂ ಶ್ರೀ ಲಾಲ್ ಬಹುದ್ದೂರ್ ಶಾಸ್ತ್ರೀ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ತಿರ್ಮಾನಿಸಲಾಗಿದೆಹೀ ವೇಳೆ ಸರ್ವಧರ್ಮ ಪ್ರಾರ್ಥನೆ, ದೇಶಭಕ್ತಿ ಗೀತೆಗಳ ಗಾಯನ ಮತ್ತು ಉಪನ್ಯಾಸವನ್ನು ಏರ್ಪಡಿಸಲಾಗುತ್ತಿದೆ. ಕಳೆದ ಬಾರಿಯಂತೆ ಈ ಬಾರಿಯು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಜಯಂತಿಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು.

ಕಾರ್ಯಕ್ರಮದಲ್ಲಿ ಹೂ ಬದಲಾಗಿ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರÀ ಜೀವನ ಚರಿತ್ರೆ, ಸಾಧನೆ, ವಿಮರ್ಶೆಗಳಂತಹ ಪುಸ್ತಕಗಳನ್ನೇ ನೀಡಬೇಕು. ಗಣೇಶ ಚತುರ್ಥಿ ಅಂಗವಾಗಿ ಮಣ್ಣಿನ ಗಣೇಶ ವಿಗ್ರಹಗಳ ಬದಲಾಗಿ ಬೆಲ್ಲದ ವಿಗ್ರಹಗಳನ್ನು ಬಳಸಿದಾಗ ರೈತರಿಗೂ ಅನುಕೂಲ ಹಾಗೂ ಮಾಲಿನ್ಯ ತಡೆಗಟ್ಟಬಹುದು ಎಂದರು.
ಗಾಂಧೀ ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆ; ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಗಾಂಧಿ ಜಯಂತಿ ಅಂಗವಾಗಿ ಪ್ರೌಢಶಾಲಾ, ಪದವಿ ಪೂರ್ವ, ಕಾಲೇಜು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಗಾಂಧಿ ಕುರಿತಂತೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಶಿಕ್ಷಣ ಇಲಾಖೆಯಿಂದ ಎಲ್ಲಾ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸುವ ಮೂಲಕ ಅತ್ಯುತ್ತಮ 3 ಪ್ರಬಂಧಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಕಳುಹಿಸಲು ಮತ್ತು ಪ್ರತ್ಯೇಕವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಎಂದು ನಗದು ಬಹುಮಾನ ನೀಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಪ್ರಕಟವಾದ ಅತ್ಯುತ್ತಮ ಪ್ರಬಂಧಗಳಿಗೆ ರಾಜ್ಯ ಮಟ್ಟದ ಪ್ರಶಸ್ತಿಗೆ ಕಳುಹಿಸಿಕೊಡಲಾಗುತ್ತದೆ ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣನಾಯ್ಕ್, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಪಾಲಿಕೆ ಆಯುಕ್ತೆ ರೇಣುಕಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಗೊಂಡ ಬಸರ್ಗಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.