

ಬೆಳಗಾವಿ (ಸೆ 16).. ಬೆಳಗಾವಿಯ ಸುವರ್ಣ ವಿಧಾನ ಸೌಧದ ಬಳಿ ಕೆಕೆ ಕೊಪ್ಪ ಗ್ರಾಮಕ್ಕೆ ತೆರಳುವ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವಿಷಯ ನನ್ನ ಗಮನಕ್ಕೆ ಬಂದ ತಕ್ಷಣ ಆಸ್ಪತ್ರೆಗೆ ತೆರಳಿ, ಗಾಯಾಳುಗಳ ಆರೋಗ್ಯದ ಸ್ಥಿತಿಯನ್ನು ವಿಚಾರಿಸಿ, ಎಲ್ಲರಿಗೂ ಧೈರ್ಯವನ್ನು ತುಂಬಿದೆ, ಜತೆಗೆ ಅಗತ್ಯವಿರುವ ಚಿಕಿತ್ಸೆಯನ್ನು ನೀಡಿರಿ ಎಂದು ವೈದ್ಯರಿಗೆ ಸೂಚನೆಯನ್ನು ನೀಡಿದರೆ.
