

ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ (ದ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ತಾಲೂಕಾ ವಲಯ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿಯ ಗಾಂಧಿ ಭವನದಲ್ಲಿ ನಡೆದ 62 ನೇ ಶಿಕ್ಷಕರ ದಿನಾಚರಣೆ ಮತ್ತು ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಲಕ್ಷ್ಮೀ ಹೇಬಳ್ಕರ್ ರವರು ಭಾಗವಹಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

ಕಾರ್ಯಕ್ರಮದಲ್ಲಿ ತಾರಿಹಾಳದ ಶ್ರೀ ಅಡವೀಶ್ವರ ದೇವರು, ಡಿಡಿಪಿಆಯ್ ಬಸವರಾಜ ನಾಲತವಾಡ, ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮು ಗುಗವಾಡ, ಗ್ರಾಮೀಣ ಪ್ರದೇಶದ BEO ಎಸ್. ಪಿ. ದಾಸಪ್ಪನವರ, ತಾಲೂಕಾ ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಪೂಜಾ ಪಾಟೀಲ, ಎಂ. ಬಿ. ಹುಲಮನಿ, ಬಸವರಾಜ ರಾಯವ್ವಗೋಳ, ಎಂ. ಎಸ್. ಮೇದಾರ ಹಾಗೂ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
