

ಇಂದು ನಂಜನಗೂಡು ನಗರಸಭೆ ಕಾರ್ಯಾಲಯದಲ್ಲಿ ಮೈಸೂರು ಜಿಲ್ಲಾಧಿಕಾರಿಗಳಾದ ಕೆ. ವಿ ರಾಜೇಂದ್ರ ರವರ ಅಧ್ಯಕ್ಷತೆಯಲ್ಲಿ ನಡೆದ ಕೌನ್ಸಿಲ್ ಸಭೆಯಲ್ಲಿ ದರ್ಶನ್ ಧ್ರುವನಾರಾಯಣ್ ಭಾಗವಹಿಸಿ, ಅಧಿಕಾರಿಗಳೊಂದಿಗೆ ನಂಜನಗೂಡು ನಗರಕ್ಕೆ ಸಂಬಂಧಿಸಿದ ಸಮಸ್ಯೆ, ಮತ್ತು ಪ್ರಮುಖ ಅಭಿವೃದ್ಧಿ ಕೆಲಸಗಳು, ಪ್ರಗತಿಯ ಹಂತದಲ್ಲಿರುವ ಕಾಮಗಾರಿಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ನಗರಸಭಾ ಪೌರಯುಕ್ತರಾದ ನಂಜುಂಡಸ್ವಾಮಿ ರವರು, ಯೋಜನಾ ನಿರ್ದೇಶಕರಾದ ಬಿ. ಶುಭ ರವರು, ಸೇರಿದಂತೆ ಅಧಿಕಾರಿಗಳು, ನಗರಸಭಾ ಸದಸ್ಯರುಗಳು, ಉಪಸ್ಥಿತರಿದ್ದರು.
