ಮಕ್ಕಳು ಮತ್ತು ಮಹಿಳೆಯರಿಗೆ ಸುರಕ್ಷತೆಗಾಗಿ ಟೈಕ್ಟಾಂಡೋ ಅವಶ್ಯಕ – ದಿನೇಶ್ ಕೆ.ಶೆಟ್ಟಿ…

ದಾವಣಗೆರೆ: ಮಕ್ಕಳು ಮತ್ತು ಮಹಿಳೆಯರಿಗೆ ಟೈಕ್ಟಾಂಡೋ ಅವಶ್ಯವಾಗಿದ್ದು, ವಿದ್ಯಾರ್ಥಿಗಳು ಕೇವಲ ಕಲಿಕೆಗೆ ಸೀಮಿತವಾಗದೇ ಕ್ರೀಡೆಗಳಲ್ಲಿ ಹೆಚ್ಚಿನ ರೀತಿಯಲ್ಲಿ ಭಾಗವಹಿಸುವಂತೆ ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿಯವರು ತಿಳಿಸಿದರು..

ನಗರದ ಗುರುಭವನದಲ್ಲಿ ದಾವಣಗೆರೆ ಜಿಲ್ಲೆಯ ಟೈಕ್ಟಾಂಡೋ ಸಂಸ್ಥೆಯಡಿಯಲ್ಲಿ ನಡೆದ ಕಲರ್ ಬೆಲ್ಟ್ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಕೇವಲ ಕಲಿಕೆಗೆ ಸೀಮಿತವಾಗಿ ಆರೋಗ್ಯದ ಕಡೆ ಗಮನಹರಿಸುತ್ತಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡುವಂತಹ ಸ್ಥಿತಿ ಬರಲಿದ್ದು, ಈಗಿನಿಂದಲೇ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಸಮಾಜಸೇವಕ ನಂದಿಗಾವಿ ಶ್ರೀನಿವಾಸ, ಬಾ ಜ ಪ ಎಸ್ ಸಿ ಮೊರ್ಚ ಉಪಾಧ್ಯಕ್ಷ ರಾಘವೇಂದ್ರ, ಕೊಂಡಜ್ಜಿ ಸಮಾಜ ಸೇವಕ ಸಿದ್ದೇಶ ಬೆಳ್ಳೊಡಿ, ಚಿತ್ರದುರ್ಗ ಜಿಲ್ಲಾ ಟೈಕ್ಟಾಂಡೋ ಸಂಸ್ಥೆಯ ಕಾರ್ಯದರ್ಶಿ ವಿಶ್ವಕರ್ಮಚಾರಿ, ಅಂತರಾಷ್ಟ್ರೀಯ ತರಬೇತಿದಾರ ಐಓಮೂರ್ತಿ,  ಹರೀಶ್, ಪ್ರವೀಣ್ ಜಿ ವಿ ಅಧ್ಯಕ್ಷರು ದಾವಣಗೆರೆ ಜಿಲ್ಲಾ ಟೈಕ್ಟಾಂಡೋ ಸಂಸ್ಥೆ, ಪ್ರಭಾಕರ ದಿನೇಶ  ರಮೇಶ ತರಬೇತಿದಾರರು ಉಪಸ್ಥಿತರಿದ್ದರು.

ವೀರೇಶ್ ಅಜ್ಜಣ್ಣನವರು ಸ್ವಾಗತಿಸಿದರು. ಪ್ರಾರ್ಥನೆ ಚಂದನ , ನಿರೂಪಣೆ ಡಾಕ್ಟರ್ ಹನುಮಂತ ರಾಜುರವರು ಹಾಗೂ ವಂದನರ್ಪಣೆಯನ್ನು ಶ್ರೀನಿವಾಸ್ ರವರು ನೆರವೇರಿಸಿದರು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!