ಜನತಾ ದರ್ಶನ: ಅಹವಾಲುಗಳ ಸ್ವೀಕಾರಜನರ ಅಲೆದಾಟ ತಪ್ಪಿಸಲು ಜನತಾ ದರ್ಶನ: ಪ್ರಕಾಶ್ ಹುಕ್ಕೇರಿ

ಬೆಳಗಾವಿ, ಸೆ.26(ಕರ್ನಾಟಕ ವಾರ್ತೆ): ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸಲು ಸ್ಥಳೀಯ ಮಟ್ಟದಲ್ಲಿ ಜನತಾ ದರ್ಶನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಸರಕಾರದ ನವದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ್ ಹುಕ್ಕೇರಿ ಅವರು ಹೇಳಿದರು.

ನಗರದ ಕೆಪಿಟಿಸಿಎಲ್ ಸಮುದಾಯ ಭವನದಲ್ಲಿ ಮಂಗಳವಾರ(ಸೆ.26) ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಡಳಿತವು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಆದಾಗ್ಯೂ ಜನರ ಅಲೆದಾಟವನ್ನು ತಪ್ಪಿಸುವುದಕ್ಕಾಗಿ ಮುಖ್ಯಮಂತ್ರಿಗಳ ಆಶಯದಂತೆ ಜನತಾದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಆಸಿಫ್(ರಾಜು) ಸೇಠ್, ಜನರು ಜನತಾ ದರ್ಶನದಲ್ಲಿ ಪಾಲ್ಗೊಂಡು ತಮ್ಮ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸಿಕೊಳ್ಳುವುದು ಸಾಧ್ಯವಾಗಲಿದೆ ಎಂದರು.
ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಲಭ್ಯವಾಗುವುದರಿಂದ ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ಹದಿನೈದು ದಿನಗಳಿಗೊಮ್ಮೆ ತಾಲ್ಲೂಕು ಮಟ್ಟದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜನತಾ ದರ್ಶನ ನಡೆಸಲಾಗುವುದು ಎಂದು ಹೇಳಿದರು.
ಜನರ ಅಹವಾಲುಗಳನ್ನು ಸ್ಥಳೀಯವಾಗಿಯೇ ಪರಿಹರಿಸುವುದು ಜನತಾ ದರ್ಶನದ ಉದ್ಧೇಶವಾಗಿದೆ. ಜನರ ಅಹವಾಲು ಸ್ವೀಕರಿಸಲು ಎಂಟು ಕೌಂಟರ್ ಗಳನ್ನು ಆರಂಭಿಸಲಾಗಿದೆ. ಇಲ್ಲಿ ಸ್ವೀಕೃತವಾಗುವ ಅರ್ಜಿಗಳು ಐಪಿಜಿಆರ್ ಎಸ್ ಪೋರ್ಟಲ್ ನಲ್ಲಿ ದಾಖಲಿಸಲಾಗುತ್ತದೆ.
ಜಿಲ್ಲಾಮಟ್ಟದಲ್ಲಿ ಬಗೆಹರಿಸಬಹುದಾದ ಅರ್ಜಿಗಳನ್ನು ತಕ್ಷಣವೇ ವಿಲೇವಾರಿ ಮಾಡಲಾಗುವುದು. ರಾಜ್ಯ ಸರಕಾರದ ಹಂತದಲ್ಲಿ ಬಗೆಹರಿಸಬಹುದಾದ ಅರ್ಜಿಗಳನ್ನು ಮುಂದಿನ ಕ್ರಮಕ್ಕಾಗಿ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಸವದತ್ತಿ ಶಾಸಕ ವಿಶ್ವಾಸ್ ವೈದ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಅಪರ ಜಿಲ್ಲಾಧಿಕಾರಿ ವಿಜಕುಮಾರ್ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಡಿಸಿಪಿ ರೋಹನ ಜಗದೀಶ್, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ ಗಿತ್ತೆ, ಐಎಎಸ್ ಪ್ರೊಬೇಷನರಿ ಅಧಿಕಾರಿ ಶುಭಂ ಶುಕ್ಲಾ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ವೇದಿಕೆಗೆ ಆಗಮಿಸಿ ಅಹವಾಲುಗಳನ್ನು ಸಲ್ಲಿಸಿದರು. ಇದಲ್ಲದೇ ಸಭಾಭವನದಲ್ಲಿ ಸ್ಥಾಪಿಸಲಾಗಿದ್ದು ಎಂಟು ಕೌಂಟರ್ ಗಳಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.

  • Related Posts

    ದೇವಸ್ಥಾನದ  ಕಾಮಗಾರಿಗೆ  25 ಲಕ್ಷ  ಹಣ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್…

    ಬೆಳಗಾವಿ ಜಿಲ್ಲೆಯ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ನೂತನ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕಟ್ಟಡದ ನಿರ್ಮಾಣದ ಕಾಮಗಾರಿಗೆ ಮೊದಲನೇ ಕಂತಿನಲ್ಲಿ 25 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಕೊಟ್ಟರು.  ಈ  ಹಿನ್ನೆಲೆಯಲ್ಲಿ ಇಂದು ದೇವಸ್ಥಾನ ಕಮಿಟಿ ಹಾಗೂ ಗ್ರಾಮಸ್ಥರ ವತಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್  ಗೌರವ-ಸನ್ಮಾನ…

    ಅಥಣಿಯಲ್ಲಿ ಶ್ರೀ ಲಕ್ಷ್ಮಣ ಸವದಿ ಪಾರ್ಕ್ ಹಾಗೂ ವೃತ್ತದ ಉದ್ಘಾಟನೆ…

    ಈ ವೇಳೆ ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರು ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಪ,ಪೂ,ಶ್ರೀ ಮರುಳಸಿದ್ಧ ಮಹಾಸ್ವಾಮೀಜಿಗಳು ಶೆಟ್ಟರಮಠ ಅಥಣಿ,ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಸದಾಶಿವ ಬುಟಾಳಿ,ಶ್ರೀ ಶಿವಾನಂದ ದಿವಾನಮಳ,ಸಂಕೋನಟ್ಟಿ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!