ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡ ನಿರ್ಮಾಣ: ಸಂಸದೆ ಶೋಭಾ ಕರಂದ್ಲಾಜೆ


ಉಡುಪಿ, ಸೆಪ್ಟಂಬರ್ 25 : ರಾಷ್ಟçಕ್ಕೆ ಮಾದರಿಯಾಗುವ ವಿದ್ಯಾಸಂಸ್ಥೆಯನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಉಡುಪಿಯ ಪ್ರಗತಿನಗರದಲ್ಲಿ 10 ಎಕ್ರೆ ಜಾಗದಲ್ಲಿ ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡವನ್ನು ಒಂದೂವರೆ ವರ್ಷದ ಒಳಗಾಗಿ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.


ಅವರು ಇಂದು ನಗರದ ಅಲೆವೂರು ಗ್ರಾಮದ ಪ್ರಗತಿನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದ ಎದುರು ಉಡುಪಿಯ ಕೇಂದ್ರೀಯ ವಿದ್ಯಾಲಯ ಶಾಲೆಯ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಕೇಂದ್ರೀಯ ವಿದ್ಯಾಲಯ ಬರಬೇಕೆನ್ನುವುದು ಜನರ ಅಪೇಕ್ಷೆಯಾಗಿದ್ದು, ಈ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ 2015 ರಲ್ಲಿ ಉಡುಪಿ ಜಿಲ್ಲೆಯಲ್ಲಿ ಕೇಂದ್ರೀಯ ವಿದ್ಯಾಲಯವು ಪ್ರಾರಂಭವಾಗಿದ್ದು, ಇದಕ್ಕೆ ಸ್ವಂತ ಕಟ್ಟಡದ ಅವಶ್ಯಕತೆ ಇತ್ತು. ಈಗ ಕಟ್ಟಡ ನಿರ್ಮಾಣಕ್ಕೆ ಇದ್ದಂತಹ ಸ್ಥಳಾವಕಾಶ ಹಾಗೂ ಇತರೆ ಅಡೆತಡೆಗಳು ನಿವಾರಣೆಗೊಂಡಿದ್ದು, ಕಟ್ಟಡದ ನಿರ್ಮಾಣ ಕಾರ್ಯಗಳು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಕೊರತೆ ಇದ್ದು, ನಾಳೆ ಮೈಸೂರಿನಲ್ಲಿ ನಡೆಯುವ ರೋಜ್‌ಗಾರ್ ಮೇಳದಲ್ಲಿ ಕೇಂದ್ರೀಯ ವಿದ್ಯಾಲಯಕ್ಕೆ ಅಗತ್ಯವಿರುವ ಶಿಕ್ಷಕರನ್ನು ನೇಮಿಸಲು ಕ್ರಮವಹಿಸಲಾಗುವುದು ಎಂದರು.
ಇಲ್ಲಿ ನಿರ್ಮಾಣವಾಗುವ ಕೇಂದ್ರೀಯ ವಿದ್ಯಾಲಯವು ಸುಸಜ್ಜಿತ ಕಟ್ಟಡ, ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ ನಂತರದಲ್ಲಿ ಉದ್ಘಾಟನೆಗೊಳ್ಳಲಿದೆ. ಕಟ್ಟಡ ನಿರ್ಮಾಣಕ್ಕೆ ಸಂಬAಧಿಸಿದAತೆ ಸಮಸ್ಯೆಗಳಿದ್ದಲ್ಲಿ ಅದನ್ನು ಬಗೆಹರಿಸಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದ ಅವರು, ಇಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಉನ್ನತ ಮಟ್ಟದ ಹುದ್ದೆಗಳನ್ನು ಪಡೆಯುವಂತೆ ಶುಭ ಹಾರೈಸಿದರು.
ಶಾಸಕ ಗುರ್ಮೆ ಸುರೇಶ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಕುಂದಾಪುರ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯತೀಶ್ ಕುಮಾರ್, ಕೇಂದ್ರೀಯ ವಿದ್ಯಾಲಯದ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು ಕೇಂದ್ರೀಯ ವಿದ್ಯಾಲಯ ಸಂಘಟನೆ ಪ್ರಾದೇಶಿಕ ಕಚೇರಿಯ ಉಪ ಆಯುಕ್ತ ಧರ್ಮೇಂದ್ರ ಪಟ್ಲೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಉಡುಪಿಯ ಬಿ.ಇ.ಓ ಡಾ. ಅಶೋಕ್ ಕಾಮತ್ ಮತ್ತು ಶಿಕ್ಷಕಿ ಮಾರ್ಗರೇಟ್ ಅಬ್ರಾಹಂ ನಿರೂಪಿಸಿದರೆ, ಪ್ರಾಂಶುಪಾಲ ನಾರಾಯಣ ರಾವ್ ವಂದಿಸಿದರು.

  • Related Posts

    ಸ್ಪರ್ಧಾತ್ಮಕ ತರಬೇತಿಯ ಲಾಭವನ್ನು ಯುವಜನರು ಪಡೆಯಿರಿ: ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್

    ಉಡುಪಿ, ಸೆಪ್ಟಂಬರ್ 25 : ಜಿಲ್ಲೆಯ ಯುವ ಜನರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ, ಉದ್ಯೋಗ ಪಡೆಯಲು ಆನ್‌ಲೈನ್ ಸ್ಪರ್ಧಾತ್ಮಕ ತರಬೇತಿಯನ್ನು ಆರಂಭಿಸಿದ್ದು, ಇದರ ಲಾಭ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕೆAದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ…

    ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಶೀಘ್ರ ತೀರ್ಮಾನ : ಸಿಎಂ ಬಸವರಾಜ ಬೊಮ್ಮಾಯಿ…

    ಉಡುಪಿ, ಜೂ,1 :ಪಠ್ಯಪುಸ್ತಕ ಪರಿಷ್ಕರಣೆಯ ವರದಿ ಪರಿಶೀಲನೆಯ ನಂತರ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದುಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಇಂದು ಅವರು ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರ…

    Leave a Reply

    Your email address will not be published. Required fields are marked *

    error: Content is protected !!