

ಯಾದಗಿರಿ ನಗರ ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಗೃಹಗಳ ನೂತನ ಕಟ್ಟಡಗಳ ಉದ್ಘಾಟನೆಯನ್ನು ಇಂದು ನೆರವೇರಿಸಿದೆ. ಬಳಿಕ ಯಾದಗಿರಿ ಜಿಲ್ಲಾ ಪೊಲೀಸ್ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದೆ.

ರಾಜ್ಯದ ಎಲ್ಲ ಪೊಲೀಸ್ ಠಾಣೆಗಳನ್ನು ಆಧುನಿಕರಣಗೊಳಿಸಲು ಸರ್ಕಾರ ಕ್ರಮ ಕೈಗೊಂಡಿದೆ. ವಿವಿಧ ಪೊಲೀಸ್ ಠಾಣೆಗಳ ಮೇಲೆ ಬೆಂಗಳೂರಿನಿಂದಲೇ ನಿಗಾ ಇಡುವಂತಹ ವ್ಯವಸ್ಥೆ ಜೊತೆಗೆ ಎಲ್ಲ ಪೊಲೀಸ್ ಠಾಣೆಗಳನ್ನು ತಾಂತ್ರಿಕವಾಗಿ ಅತ್ಯಾಧುನಿಕರಣಗೊಳಿಸಲು ಸರ್ಕಾರ ಹಾಗೂ ಮಾನ್ಯ ಮುಖ್ಯಮಂತ್ರಿಯವರು ದೂರ ದೃಷ್ಟಿ ಹೊಂದಿದ್ದಾರೆ. ಪೊಲೀಸ್ ಸಿಬ್ಬಂದಿಗಳು ಎಲ್ಲ ಸಂದರ್ಭದಲ್ಲಿಯೂ ಸಾರ್ವಜನಿಕರೊಂದಿಗೆ ಜನಸ್ನೇಹಿಯಾಗಿ, ಜವಾಬ್ಧಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಸೂಚಿಸಿದೆ.

ಈ ಸಂದರ್ಭದಲ್ಲಿ ಸಣ್ಣ ಕೈಗಾರಿಕೆ ಸಚಿವರಾದ ಶರಣಬಸಪ್ಪ ದರ್ಶನಾಪುರ, ಶಾಸಕರಾದ ಚನ್ನರೆಡ್ಡಿ ಪಾಟೀಲ್, ಶರಣಗೌಡ ಕಂದಕೂರು, ರಾಜಾ ವೇಣುಗೋಪಾಲ್ ನಾಯಕ್, ಈಶಾನ್ಯ ವಲಯ ಐಜಿಪಿ ಅಜಯ್ ಹಿಲೋರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪೃಥ್ವಿಕ್ ಶಂಕರ್ ಅವರು ಉಪಸ್ಥಿತರಿದ್ದರು.