

ರಾಮನಗರ ಜಿಲ್ಲೆಯ ಆನೆ ಮತ್ತು ಮಾನವ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಇಂದು ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಮನಗರ ಕ್ಷೇತ್ರದ ಶಾಸಕರಾದ ಇಕ್ಬಾಲ್ ಹುಸೇನ್, ಚನ್ನಪಟ್ಟಣ ಕ್ಷೇತ್ರದ ಶಾಸಕರಾದ ಶ್ರೀ ಸಿಪಿ ಯೋಗೇಶ್ವರ್, ಮಾಜಿ ಸಂಸದರಾದ ಡಿಕೆ ಸುರೇಶ, ಜಿಲ್ಲಾಧಿಕಾರಿಗಳು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಆನೆ ಮತ್ತು ಮಾನವ ಸಂಘರ್ಷದಿಂದ ರೈತರಿಗೆ ಉಂಟಾಗುತ್ತಿರುವ ಬೆಳೆ ನಾಶ ಮತ್ತು ಜೀವ ಹಾನಿಯ ಕುರಿತು ಚರ್ಚೆಸಲಾಯಿತು. ರೈತರು ತಮ್ಮ ಜಮೀನಿಗೆ ಹೋಗಲು ಹೆದರುವ ಪರಿಸ್ಥಿತಿಯು ತೀವ್ರಗೊಳ್ಳುತ್ತಿರುವುದನ್ನು ಗಮನಿಸಿ, ಈ ಸಮಸ್ಯೆ ಪರಿಹಾರಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.