

ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅದ್ಯಕ್ಷತೆಯನ್ನು ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ವಹಿಸಿದ್ದರು, ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್, ಮಾನ್ಯ ಸಂಸದರು, ದಾವಣಗೆರೆ ಜಿಲ್ಲೆರವರು ಆಗಮಿಸಿದ್ದರು. ಅತಿಥಿಗಳಾಗಿ ಆರ್ ಟಿ ಓ ಅಧಿಕಾರಿಗಳಾದ ಮಹಮ್ಮದ್ ಖಾಲಿದ್ ರವರು ಹಾಗೂ ಲಾರಿ ಮಾಲೀಕರ ಸಂಘದ ಅಧ್ಯಕ್ಷರಾದ ಶ್ರೀ ಸೈಫುಲ್ಲಾ ರವರು ಆಗಮಿಸಿದ್ದರು
ಸಿಪಿಐ ಸಂಚಾರ ವೃತ್ತ ದಾವಣಗೆರೆ ರವರಾದ ಶ್ರೀ ಮಂಜುನಾಥ ನಲವಾಗಲು ರವರು ವೇಧಿಕೆ ಮೇಲಿದ್ದ ಅತಿಥಿಗಳನ್ನು ಸ್ವಾಗತಿಸಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಮಂಜುನಾಥ ಜಿ ರವರು ಪ್ರಸ್ತಾವಿಕ ನುಡಿಗಳನ್ನು ಹೇಳಿ- ಜಿಲ್ಲಾ ಪೊಲೀಸ್ ವತಿಯಿಂದ ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದರ ಬಗ್ಗೆ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾನ್ಯ ಸಂಸದರು ಹಾಗೂ ಅಧ್ಯಕ್ಷತೆ ವಹಿಸಿದ್ದ ಪೊಲೀಸ್ ಅಧೀಕ್ಷಕರು ಗಿಡಕ್ಕೆ ನೀರು ಹಾಕು ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾನ್ಯ ಸಂಸದರು ಮಾತನಾಡಿ- ಜಿಲ್ಲೆಯ ಪೊಲೀಸ್ ಅಧೀಕ್ಷಕರವರ ಮಾರ್ಗದರ್ಶನದಲ್ಲಿ ದಾವಣಗೆರೆ ಜಿಲ್ಲೆಯ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಸಾರ್ವಜನಿಕರಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ವಾಹನ ಸವಾರರಿಗೆ ಸತತ ಒಂದು ತಿಂಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಂಚಾರ ನಿಯಮಗಳ ಪಾಲನೆ ಬಗ್ಗೆ, ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ರಸ್ತೆ ಸುರಕ್ಷತಾ ನಿಯಮಗಳು ಇರುವುದು ವಾಹನ ಸವಾರರ ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ, ಆಗಾಗಿ ನಮ್ಮ ಸುರಕ್ಷತೆಗಾಗಿ ಸಂಚಾರ ನಿಯಮಗಳು/ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು. ಶಾಲಾ ಪುಟ್ಟ ಪುಟ್ಟ ಮಕ್ಕಳು ಕಿರು ನಾಟಕದ ಮೂಲಕ ಸಂಚಾರ ನಿಯಮಗಳು/ರಸ್ತೆ ಸುರಕ್ಷತಾ ನಿಯಮಗಳನ್ನು ತಿಳಿಸಿಕೊಟ್ಟದ್ದನ್ನು ಪ್ರಶಂಸಿಸಿದರು. ಎಲ್ಲಾರೂ ಕಡ್ಡಾಯವಾಗಿ ಸಂಚಾರ ನಿಯಮಗಳು/ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ಸುರಕ್ಷಿತವಾಗಿರಿ ಎಂದು ತಿಳಿಸಿದರು
ಪೊಲೀಸ್ ಅಧೀಕ್ಷಕರು ಮಾತನಾಡಿ- ಸರ್ವಜನಿಕರು ಎಲ್ಲರೂ, ವಾಹನ ಸವಾರರೇಲ್ಲರೂ ಕಡ್ಡಾಯವಾಗಿ ಸಂಚಾರ ನಿಯಮಗಳು/ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿದಾಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಅರ್ಥ ಬರುತ್ತದೆ. ಆದ್ದರಿಂದ ನಿಮಗಾಗಿ , ನಿಮ್ಮ ಸುರಕ್ಷತೆಗಾಗಿ ಸಂಚಾರ ಸುರಕ್ಷತಾ ನಿಯಮಗಳನ್ನು ಪಾಲಿಸಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಪಘಾತ ರಹಿತ ವಾಹನ ಚಾಲಕರಿಗೆ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಯಿತು ಮತ್ತು ರಸ್ತೆ ಸುರಕ್ಷತಾ ನಿಯಮಗಳ ಸಂಬಂಧ ವಿವಿಧ ಶಾಲೆಗಳಲ್ಲಿ ನಡೆಸಿದ್ದ ಚಿತ್ರ ಕಲೆ, ರಸಪ್ರಶ್ನೆ, ಪ್ರಬಂಧ ಸ್ಪರ್ಧೇಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ & ಬಹುಮಾನ ನೀಡಲಾಯಿತು.
ನಗರ ಡಿವೈಎಸ್ಪಿ ಶ್ರೀ ಶರಣಬಸವೇಶ್ವರ ಬೀಮರಾವ್, ಬಿ ರವರು ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರಿಗೆ ವಂದಿಸಿದರು.
ಕಾರ್ಯಕ್ರಮದಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳಾದ ಪಿಎಸ್ ಐ ಶ್ರೀಮತಿ ಶೈಲಜಾ, ಶ್ರೀಮತಿ ನಿರ್ಮಲ, ಶ್ರೀಮತಿ ಜಯಶೀಲ, ಶ್ರೀ ಮಂಜಪ್ಪ ರವರು ಹಾಗೂ ನಗರದ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.