

ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ನ್ಯಾಯಾಲಯದ, ಆವರಣದಲ್ಲಿ ಜ30ರಂದು ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆ ಜರುಗಿತು.

ಹಿರಿಯ ಶ್ರೇಣಿ ನ್ಯಾಯಾಧೀಶರಾದ ಜೆ.ಯೋಗೇಶರವರು, ಮಹಾತ್ಮಾಗಾಂಧೀಜಿಯವರ ಭಾವಚಿತ್ತಕ್ಕೆ ಪುಷ್ಪ ಅರ್ಪಿಸಿ ಮಾತನಾಡಿ ನುಡಿನಮನಗಳನ್ನು ಅರ್ಪಿಸಿದರು. ತದನಂತರ ವಕೀಲರ ಸಂಘದ ಮಾಜಿ ಅಧ್ಯಕ್ಷ ಜಿ.ಹೊನ್ನೂರಪ್ಪ ಸೇರಿದಂತೆ, ಹಿರಿಯ ಮಹಿಳಾ ವಕೀಲರಾದ ಕೆ.ಹೆಚ್.ಎಮ್.ಶೈಲಜಾ ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು. ನ್ಯಾಯಾಲಯದ ಅಧಿಕಾರಿಗಳು ಸಿಬ್ಬಂದಿಯವರಾದ ಕೃಷ್ಣವೇಣಿ ಸೇರಿದಂತೆ ಎಲ್ಲಾ ಸಿಬ್ಬಂದಿಯರು, ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಭಾವ ಪೂರ್ಣ ನಮನಗಳನ್ನು ಸಲ್ಲಿಸಿದರು. ನ್ಯಾಯಾಲಯಕ್ಕೆ ಹಾಜರಿದ್ದ ಪೊಲೀಸರು ಹಾಗೂ ಎಲ್ಲಾ ಕಕ್ಷಿದಾರರು, ಮಹಾತ್ಮಾ ಗಾಂಧೀಜಿಯವರ ಪುಣ್ಯ ಸ್ಮರಣೆಯಲ್ಲಿ ಪಾಲ್ಗೊಂಡರು.