ಬಾಣಂತಿ ಮತ್ತು ಅಭಿಜಾತ ಶಿಶುಗಳ ಸುರಕ್ಷತೆಗೆ ಶ್ರಮಿಸಲು ವೈದ್ಯರಿಗೆ ಸೂಚನೆ : ಗುರುದತ್ತಹೆಗಡೆ

ಶಿವಮೊಗ್ಗ : ಜನವರಿ ೩೧ : ಜಿಲ್ಲೆಯ ಎಲ್ಲಾ ರ‍್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುತ್ತಿರುವ ಬಾಣಂತಿ ಮತ್ತು ಅಭಿಜಾತ ಶಿಶುಗಳ ಸಾವು-ನೋವು ನಿಯಂತ್ರಿಸುವಲ್ಲಿ ತಜ್ಞ ವೈದ್ಯಾಧಿಕಾರಿಗಳು ನರ‍್ಲಕ್ಷ್ಯ ತೋರದೇ ಮಾನವೀಯ ನೆಲೆಯಲ್ಲಿ ಸೇವೆ ಒದಗಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ವೈದ್ಯರಿಗೆ ಕಿವಿಮಾತು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ರ‍್ಪಡಿಸಲಾಗಿದ್ದ ಬಾಣಂತಿಯ ಸಾವು ಕುರಿತು ಪರಾರ‍್ಶನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕಳೆದ ೨೦೨೪ರ ಸೆಪ್ಟಂರ‍್ಮಾಹೆಯಿಂದ ಇಂದಿನವರೆಗೆ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು ೦೮ ಪ್ರಕರಣಗಳು ದಾಖಲಾಗಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದ ಅವರು, ಗಂಡಾಂತರ ರ‍್ಭಿಣಿಯರು ಹೆರಿಗೆಯ ದಿನಕ್ಕೆ ಮುಂಚಿತವಾಗಿಯೇ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ, ಅವರ ಸಲಹೆ ಪಡೆದು, ಮಾನಸಿಕವಾಗಿ ಸಿದ್ಧರಾಗಿರಬೇಕು. ಹೆರಿಗೆಯ ಕೊನೆಯ ಕ್ಷಣದವರೆಗೆ ಕಾಲಹರಣ ಮಾಡದೆ ತಾವು ಮತ್ತು ಕೂಸಿನ ಆರೋಗ್ಯ ಮತ್ತು ಸುರಕ್ಷತೆಯ ಕಡೆಗೆ ಗಮನಹರಿಸುವಂತೆ ಅವರು ಸೂಚಿಸಿದರು.

ಗಂಡಾಂತರ ರ‍್ಭಿಣಿಯರ ಆರೈಕೆ ನೋಡಿಕೊಳ್ಳುತ್ತಿರುವ ವೈದ್ಯರು ಸಾಂರ‍್ಭಿಕ ಸ್ಥಿತಿಗತಿಯ ಬಗ್ಗೆ ಕಾಲಕಾಲಕ್ಕೆ ಸಲಹೆ ನೀಡಬೇಕಲ್ಲದೇ ಅಗತ್ಯವಿದ್ದಾಗ ತಜ್ಞ ವೈದ್ಯರಿಗೆ ಶಿಫಾರಸ್ಸು ಮಾಡಬೇಕು. ಇದರೊಂದಿಗೆ ವೈದ್ಯರು ಶಿಫಾರಸ್ಸು ಮಾಡುವ ವೈದ್ಯರಿಗೆ ಮುಂಚಿತವಾಗಿ ರ‍್ಭಿಣಿಯ ಮಾಹಿತಿಯನ್ನು ನೀಡಿರಬೇಕು. ಜೊತೆಗೆ ಶುಶ್ರೂಷೆಯೊಬ್ಬರನ್ನು ಕಳುಹಿಸಿಕೊಡಬೇಕು ಎಂದವರು ಸಲಹೆ ನೀಡಿದರು.

ಅಲ್ಲದೇ ಸಂಭಾವ್ಯ ರಕ್ತಹೀನತೆ ಹಾಗೂ ಸೇವಿಸಲೇಬೇಕಾದ ಪೌಷ್ಟಿಕ ಆಹಾರದ ಕುರಿತು ಸೂಕ್ತ ಹಾಗೂ ಸಕಾಲಿಕ ಸಲಹೆ ನೀಡುವಂತೆ ಸೂಚಿಸಿದ ಅವರು, ಬಾಣಂತಿಯರು ಪ್ರತಿ ರ‍್ಭ ಧರಿಸುವುದಕ್ಕೆ ಮುನ್ನ ಕನಿಷ್ಟ ಅಂತರ ಹೊಂದಿದ್ದು, ಕಾಲಕಾಲಕ್ಕೆ ರಕ್ತದೊತ್ತಡ, ಮಧುಮೇಹ ಮುಂತಾದ ತಪಾಸಣೆಗಳನ್ನು ಮಾಡಿಸುವಂತೆ ಅವರು ಸಲಹೆ ನೀಡಿದರು.

ಕೆಲವು ಬಾಣಂತಿಯರ ಸಾವಿನ ಪ್ರಕರಣಗಳಲ್ಲಿ ವೈದ್ಯರ ನರ‍್ಲಕ್ಷ್ಯ ಇರುವ ಬಗ್ಗೆ ದೂರುಗಳಿದ್ದು, ವಾಸ್ತವ ವರದಿಯನ್ನು ಪಡೆದು ಕೂಡಲೇ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ನಟರಾಜ್ಅವರಿಗೆ ಸೂಚಿಸಿದ ಅವರು, ಬಾಣಂತಿಯರ ಕೆಲವು ಸಾವಿನ ಪ್ರಕರಣಗಳಲ್ಲಿ ಕೊನೆ ಕ್ಷಣದಲ್ಲಿ ನೆರೆಯ ಜಿಲ್ಲೆಗಳಿಂದ ಶಿಫಾರಸ್ಸುಗೊಂಡ ಪ್ರಕರಣಗಳೇ ಆಗಿರುವುದು ಕಂಡುಬರುತ್ತದೆ. ಆದಾಗ್ಯೂ ವೈದ್ಯರು ಸಕಾಲಿಕವಾಗಿ ಚಿಕಿತ್ಸೆ ನೀಡುವ ಮೂಲಕ ಬಾಣಂತಿಯ ಸಾವಿನ ಪ್ರಕರಣಗಳು ನಡೆಯದಂತೆ ಕ್ರಮ ವಹಿಸಬೇಕೆಂದು ಅವರು ಸೂಚಿಸಿದರು.

ರಾಜ್ಯದಾದ್ಯಂತ ಇಂತಹ ಪ್ರಕರಣಗಳು ಅಲ್ಲಲ್ಲಿ ಕೇಳಿಬರುತ್ತಿದ್ದು, ರ‍್ಕಾರವೂ ಸಹ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಕಂಡುಬರದಂತೆ, ಸಕಾಲಿಕ ಚಿಕಿತ್ಸೆ ನೀಡುವ ಮೂಲಕ ತಾಯಿ ಮಗುವಿನ ಸುರಕ್ಷತೆಗೆ ವಿಶೇಷ ಕಾಳಜಿ ವಹಿಸುವಂತೆ ಅವರು ವೈದ್ಯರಿಗೆ ಸೂಚಿಸಿದರು.
ವಿಶೇಷವಾಗಿ ರ‍್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸುವ ಬಹುಸಂಖ್ಯಾತರು ಸಾಮಾನ್ಯ ಕುಟುಂಬದವರಾಗಿರುತ್ತಾರೆ. ಅಂತಹವರಿಗೆ ಸಕಾಲದಲ್ಲಿ ಚಿಕಿತ್ಸೆದೊರೆಯುವಂತೆ ನೋಡಿಕೊಳ್ಳಬೇಕು. ನಿಯಮಾನುಸಾರ ಹಾಗೂ ಅಗತ್ಯವಿದ್ದಲ್ಲಿ ತರ‍್ತು ಚಿಕಿತ್ಸೆ ನೀಡುವಲ್ಲಿ ವೈದ್ಯಕೀಯ ಸಿಬ್ಬಂಧಿ ಗಮನಹರಿಸುವಂತೆ ಅವರು ಸೂಚಿಸಿದ ಅವರು ಚಿಕಿತ್ಸೆ ನೀಡುವಲ್ಲಿ ವೈದ್ಯರಿಂದ ಯಾವುದೇ ಲೋಪಗಳಾಗದಂತೆ ನೋಡಿಕೊಳ್ಳಬೇಕು. ಚಕಿತ್ಸೆಗೆ ದಾಖಲಾಗುವ ಪ್ರತಿ ರೋಗಿಯ ಬಗ್ಗೆಯೂ ಇದೇ ಕಾಳಜಿ ವಹಿಸುವಂತೆ ಸಾವು ನಿಯಂತ್ರಿಸಿ, ಅಮೂಲ್ಯ ಜೀವ ಉಳಿಸುವಂತೆ ಅವರು ಸೂಚಿಸಿದರು.

ತರ‍್ತು ಸಂರ‍್ಭಗಳಲ್ಲಿ ರಕ್ತ ದೊರೆಯುವಂತೆ ಎಲ್ಲಾ ತಾಲೂಕು ಆಸ್ಪತ್ರೆಗಳ ,ಮುಖ್ಯಾಧಿಕಾರಿಗಳು ಕ್ರಮವಹಿಸಿ, ಅಲ್ಲದೇ ಉತ್ತಮ ಆರೋಗ್ಯ ಸೇವೆ ಒದಗಿಸುವಲ್ಲಿ ಅಡಚಣೆಗಳಿದ್ದಲ್ಲಿ ಕೂಡಲೇ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಲಿಖಿತವಾಗಿ ಮಾಹಿತಿ ನೀಡಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಟರಾಜ್, ಡಾ|| ಸಿದ್ದನಗೌಡ, ಆರ್.ಸಿ.ಹೆಚ್.ಡಾ||ಮಲ್ಲಪ್ಪ, ಡಾ|| ನಾಗರಾಜನಾಯ್ಕ್, ಡಾ|| ಸ್ಮೃತಿ, ಡಾ|| ಹೇಮಾಮಹೇಶ್ಸೇರಿದಂತೆ ಎಲ್ಲಾ ತಾಲೂಕುಗಳ ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

  • Related Posts

    ಶಿವಮೊಗ್ಗದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ, ಬಿಜೆಪಿ ಪಕ್ಷದ ನೂತನ ಜಿಲ್ಲಾ ಪದಾಧಿಕಾರಿಗಳ ಕಾರ್ಯಕ್ರಮ

    ೨೬-೭೨೫, ಶಿವಮೊಗ್ಗ, ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಭಾರತೀಯ ಜನತಾ ಪಕ್ಷದ ನೂತನ ಜಿಲ್ಲಾ ಪದಾಧಿಕಾರಿಗಳ ಘೋಷಣೆ ಹಾಗೂ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷರುಗಳ ಪದಗ್ರಹಣ ಸಮಾರಂಭದಲ್ಲಿ ಪಕ್ಷದ ಶಾಲು ಹೊದಿಸುವ ಮೂಲಕ ಚಾಲನೆ ನೀಡಿದರು. ಬಿ ವೈ ರಾಘವೇಂದ್ರರವರು…

    ಶಿವಮೊಗ್ಗದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ….

    ೨೬ ಜೂಲೈ ೨೦೨೫, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಶಿವಮೊಗ್ಗ ತಾಲ್ಲೂಕು ಘಟಕ ಇಂದು ಶಿವಮೊಗ್ಗದ ವಿನೋಬನಗರದ ಸ್ವಗೃಹದಲ್ಲಿ ಆಯೋಜಿಸಿದ್ದ ಪದಾಧಿಕಾರಿಗಳ ಘೋಷಣೆ ಹಾಗೂ ವಿವಿಧ ಘಟಕಗಳ ಜವಾಬ್ದಾರಿ ಹಂಚಿಕೆ ಸಮಾರಂಭದಲ್ಲಿ ಪಾಲ್ಗೊಂಡು ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!