

ಬೆಂಗಳೂರು ನಗರ ಜಿಲ್ಲೆ, ಜನವರಿ 31 ಬೆಂಗಳೂರು ನಗರದಲ್ಲಿ ಅತಿ ವೇಗದ ವಾಹನ ಚಾಲನೆಯಿಂದಾಗಿ ಅಪಘಾತ ಹೆಚ್ಚಾಗುತಿರುವ ಕಾರಣ ರಸ್ತೆ ಸುರಕ್ಷತಾ ನಿಯಮ ಪಾಲಿಸುವಂತೆ ವಾಹನ ಚಾಲಕರಿಗೆ ಅರಿವು ಮೂಡಿಸಿ ಎಂದು ರಸ್ತೆ ಸುರಕ್ಷತಾ ಅಧಿಕಾರಿಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ ಜಗದೀಶ್ ರವರು ತಿಳಿಸಿದರು.
ಇಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಛೇರಿ ಸಂಭಾಗಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಆಯೋಜಿಸಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಂಗಳೂರಿಂದ ಮೈಸೂರಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬ್ಲಾಕ್ ಸ್ಪಾಟ್ ಗುರುತಿಸಿ ಸೂಚನಾ ಫಲಕಗಳು ಹಾಗೂ ಲೈಟಿಂಗ್ ಮತ್ತು ಬೆಳಕಿನ ಪ್ರತಿಫಲನಗಳನ್ನು ಅಳವಡಿಸಿ ರಸ್ತೆ ಅಪಘಾತಗಳನ್ನು ನಿಯಂತ್ರಿಸಿ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಹೆಲ್ಮೆಟ್ ರಹಿತ ವಾಹನ ಚಾಲನೆ, ವೇಗದ ವಾಹನ ಚಾಲನೆ, ಬೈಕ್ ವೀಲಿಂಗ್ ಮಾಡುವುದರಿಂದ ಆಗುವ ಅವಘಡಗಳ ಬಗ್ಗೆ ಯುವಕರಲ್ಲಿ ಅರಿವು ಮೂಡಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಭಾರಿ ವಾಹನಗಳಿಂದ ಹೆಚ್ಚಿನ ಗಾತ್ರದ ಸರಕುಗಳನ್ನು ಸಾಗಾಣಿಕೆ ಮಾಡುವುದರಿಂದ ರಸ್ತೆಗಳು ಹಾಳಾಗುತ್ತಿದ್ದು, ರಸ್ತೆಗಳ ಗುಂಡಿಗಳು ಹೆಚ್ಚಾಗುತ್ತಿದೆ. ಆದರಿಂದ ಅಂತಹ ವಾಹನಗಳನ್ನು ಪರಿಶೀಲನೆ ನಡೆಸಿ ನಿಯಮಾನುಸಾರ ಕ್ರಮವಹಿಸಬೇಕೆಂದು ರಸ್ತೆ ಸರಕ್ಷತಾ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಲೋಕೊಪಾಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರು ಚಂದ್ರಶೇಖರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ತಾಂತ್ರಿಕ ವಿಭಾಗ ವ್ಯವಸ್ಥಾಪಕರಾದ ಸೌರಬ್ ಚೌಧರಿ, ಶಾಲಾ ಅಭಿವೃದ್ಧಿ ಯೋಜನೆ ಅಧಿಕಾರಿಗಳಾದ ಇಂದಿರಾ, ಬೆಂಗಳೂರು ವಿಭಾಗದ ಎಲ್ಲಾ ಆರ್.ಟಿ.ಓ ಅಧಿಕಾರಿಗಳು ಸೆರಿದಂತೆ ಸಮಿತಿ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.