ಶಿವಮೊಗ್ಗದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ, ಬಿಜೆಪಿ ಪಕ್ಷದ ನೂತನ ಜಿಲ್ಲಾ ಪದಾಧಿಕಾರಿಗಳ ಕಾರ್ಯಕ್ರಮ

೨೬-೭೨೫, ಶಿವಮೊಗ್ಗ, ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಭಾರತೀಯ ಜನತಾ ಪಕ್ಷದ ನೂತನ ಜಿಲ್ಲಾ ಪದಾಧಿಕಾರಿಗಳ ಘೋಷಣೆ ಹಾಗೂ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷರುಗಳ ಪದಗ್ರಹಣ ಸಮಾರಂಭದಲ್ಲಿ ಪಕ್ಷದ ಶಾಲು ಹೊದಿಸುವ ಮೂಲಕ ಚಾಲನೆ ನೀಡಿದರು.

ಬಿ ವೈ ರಾಘವೇಂದ್ರರವರು ಮಾತನಾಡಿ ಭಾರತೀಯ ಜನತಾ ಪಕ್ಷ ಜಗತ್ತಿನಲ್ಲಿ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಏಕೈಕ ರಾಜಕೀಯ ಪಕ್ಷ. ಹಿರಿಯರ ಅತ್ಯುತ್ತಮ ಸಂಘಟನೆ, ಅಧಿಕಾರದ ಅವಧಿಯಲ್ಲಿ ಉತ್ತಮ ಆಡಳಿತ ಹಾಗೂ ಜನಪರ ಯೋಜನೆಗಳಿಂದ ಜನ ಸಾಮಾನ್ಯರ ನಂಬಿಕೆ ಸೇರಿದಂತೆ ಇನ್ನೂ ಅನೇಕ ಧೃಡ ನಿರ್ಧಾರದಿಂದ ಪಕ್ಷ ಇಂದು ಐತಿಹಾಸಿಕ ಕಾಲಘಟ್ಟಕ್ಕೆ ಬಂದು ನಿಂತಿದೆ.

ಹಿರಿಯರ ನಿರಂತರ ಸಲಹೆ ಮತ್ತು ಮಾರ್ಗದರ್ಶನ ಪಡೆದು ಯುವಕರ ತಂಡವನ್ನು ವಿಶ್ವಾಸಕ್ಕೆ ಪಡೆದುಕೊಂಡು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಪಕ್ಷದ ಬಲವರ್ಧನೆಗೆ ನಿರಂತರ ಶ್ರಮಿಸುವಂತೆ ಈ ಮೂಲಕ ಮುಂದಿನ ದಿನಗಳಲ್ಲಿ ಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಪಕ್ಷ ಸಂಘಟಿಸುವಂತೆ ಕರೆ ಕೊಟ್ಟರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್ ಅವರು, ಶಾಸಕರುಗಳಾದ ಶ್ರೀ ಚನ್ನಬಸಪ್ಪ ಅವರು ಹಾಗೂ ಶ್ರೀ ಧನಂಜಯ ಸರ್ಜಿ ಅವರು, ಮಾಜಿ ಶಾಸಕರಾದ ಶ್ರೀ ಅಶೋಕ್ ನಾಯಕ್ ಅವರು, ಶ್ರೀ ಅಶೋಕ್ ಅವರು ಸೇರಿದಂತೆ ಇನ್ನೂ ಅನೇಕ ಮುಖಂಡರು ಉಪಸ್ಥಿತರಿದ್ದರು.

  • Related Posts

    ಶಿವಮೊಗ್ಗದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ….

    ೨೬ ಜೂಲೈ ೨೦೨೫, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಶಿವಮೊಗ್ಗ ತಾಲ್ಲೂಕು ಘಟಕ ಇಂದು ಶಿವಮೊಗ್ಗದ ವಿನೋಬನಗರದ ಸ್ವಗೃಹದಲ್ಲಿ ಆಯೋಜಿಸಿದ್ದ ಪದಾಧಿಕಾರಿಗಳ ಘೋಷಣೆ ಹಾಗೂ ವಿವಿಧ ಘಟಕಗಳ ಜವಾಬ್ದಾರಿ ಹಂಚಿಕೆ ಸಮಾರಂಭದಲ್ಲಿ ಪಾಲ್ಗೊಂಡು ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.…

    ಶಿವಮೊಗ್ಗ ಅಭಿವೃದ್ಧಿಗೆ ಕುರಿತು ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ ಅವರನ್ನು ಭೇಟಿ

    ಬಿ. ವೈ. ರಾಘವೇಂದ್ರರವರು ಶಿವಮೊಗ್ಗ ಕ್ಷೇತ್ರದ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಯ ಕುರಿತು ಹಿಂದಿನ ಪ್ರಸ್ತಾವನೆಯನ್ನು ಮುಂದುವರಿಸಲು ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ ಅವರನ್ನು ಭೇಟಿ ಮಾಡಿ ಮಾತನಾಡಿಯಾರು. ರಾಜ್ಯಗಳಿಗೆ ಬಂಡವಾಳ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!