ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ.

ಜಗಳೂರು : ದೇಶ ಆರ್ಥಿಕವಾಗಿ ದೀವಾಳಿಯಾಗುತ್ತಿದೆ. ಇದಕ್ಕೆ ಕಾರಣ ಕೇಂದ್ರ ಸರ್ಕಾರ ಆರ್ಥಿಕ ನೀತಿಗಳು ಕಾರ್ಪೊರೇಟ್ ಪರವಾಗಿದ್ದು ರಾಷ್ಟ್ರದ ವಿರೋಧಿ ನೀತಿಗೆ ವಿರುದ್ಧವಾಗಿವೆ ಎಂದು ತಾಲೂಕು ಜೆಸಿಟಿಯು ಅಧ್ಯಕ್ಷ ಮೊಹಮದ್ ಪಾಷ ಕಿಡಿಕಾರಿದರು.

ಸೋಮವಾರ ಪಟ್ಟಣದಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು ಸ್ವತಂತ್ರ ವಲಯಗಳ ಅಖಿಲ ಭಾರತ ಒಕ್ಕೂಟಗಳು ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ಜೊತೆ ಪ್ರತಿಭಟನೆ ನಡೆಸಿದ ಅವರು ‘ಭಾರತ ಉಳಿಸಿ ಜನರನ್ನು ರಕ್ಷಿಸಿ’ ಎಂದು ಜಾಥ ನಡೆಸಿ ತಹಶೀಲ್ದಾರ್ ಅವರಿಗೆ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು.

ಅಖಿಲ ಭಾರತ ಸಾರ್ವತ್ರಿಕ ಮುಷ್ಕರದಲ್ಲಿ ಮಾತನಾಡಿದ ಅವರು, ಕಾರ್ಮಿಕ ಸಂಹಿತೆಗಳನ್ನು ರದ್ದುಗಳಿಸಬೇಕು. ಎಲ್ಲಾ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕವಾಗಿ ಬೆಂಬಲ ಬೆಲೆ ಖಾತ್ರಿಮಾಡಬೇಕು. ವಿದ್ಯುತ್ ಮಸೂದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು. ಆದಾಯ ತೆರಿಗೆ ಪಾವತಿಸದ ಕುಟುಂಬಗಳಿಗೆ ತಿಂಗಳಿಗೆ ೭,೫೦೦ ಆಹಾರ ಮತ್ತು ಆದಾಯ ಬೆಂಬಲ ಒದಗಿಸಬೇಕು, ನರೇಗಾಗೆ ಹೆಚ್ಚಿನ ನಿಧಿ ನೀಡಿ ಮತ್ತು ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಗಳಿಗೆ ವಿಸ್ತರಿಸಬೇಕು ಎಂಬ ಬೇಡಿಕೆಯೂ ಸೇರಿದಂತೆ ಅನೇಕ ಬೇಡಿಕೆಗಳನ್ನು ಕೇಂದ್ರ ಸರ್ಕಾರ ತಕ್ಷಣವೇ ಈಡೇರಿಸಬೇಕು ಎಂದು ಆಗ್ರಹಿಸಿದರು.

ಈವೇಳೆ ಜೆಸಿಟಿಸಿ ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ, ಗ್ರಾಪಂ ಅಸಂಘಟಿತ ನೌಕರರ ಸಂಘದ ಅಧ್ಯಕ್ಷ ಮಹಾಂತೇಶ್, ನೆರಳು ಬೀಡಿ ಕಾರ್ಮಿಕರ ಯೂನಿಯನ್, ಕರ್ನಾಟಕ ಶ್ರಮಿಕ ಶಕ್ತಿ, ಬ್ಯಾಂಕ್ ನೌಕರರ ಸಂಘ ಮತ್ತು ಎಲ್‌ಐಸಿ ಎಂಪ್ಲಾಯಿಸ್ ಯೂನಿಯ್‌ನ ಕಾರ್ಮಿಕರು ಮತ್ತು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಪಟ್ಟಣದ ತಾಲೂಕು ಕಚೇರಿ ಎದುರು ವಿವಿಧ ಸಂಘಟನೆಗಳ ಪದಾಧಿಕಾರಿಗಳು ವಿವಿಧ ಬೇಡಿಎಕಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!