
೨೭ ಜೂಲೈ ೨೦೨೫, ದಾವಣಗೆರೆ ಜಿಲ್ಲೆ, ಹೊನ್ನಾಳಿ ನಗರದಲ್ಲಿ ಭಾರತೀಯ ಜನತಾ ಪಾರ್ಟಿ ಮಂಡಲ ವತಿಯಿಂದ ಯೂರಿಯಾ ಗೊಬ್ಬರದ ಕೊರತೆ ಉಂಟಾಗಿದ್ದು, ರೈತರು ಮುಂದೇನು ಗತಿ ಎಂದು ಆತಂಕಕ್ಕೀಡಾಗಿದ್ದಾರೆ. ತಕ್ಷಣ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಯೂರಿಯಾ ಗೊಬ್ಬರವನ್ನು ವಿತರಿಸುವ ಕೆಲಸ ಮಾಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿ ಎಂ ಪಿ ರೇಣುಕಾಚಾರ್ಯ ರವರು ಬೃಹತ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ ರಾಜೀವ್ ಅವರು ದಾವಣಗೆರೆ ಬಿಜೆಪಿ ಜಿಲ್ಲಾಧ್ಯಕ್ಷರಾದ ರಾಜಶೇಖರ್ ನಾಗಪ್ಪನವರು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಡ್ಲೆ ಬಾಳ್ ಧನಂಜಯ್ ಮುಖಂಡರಾದ ಚಂದ್ರಶೇಖರ್ ಪೂಜಾ ರವರು ಮಂಡಲ ಅಧ್ಯಕ್ಷರಾದ ಅರಕೆರೆ ನಾಗರಾಜ್ ಹಾಗೂ ಪಕ್ಷದ ಪದಾಧಿಕಾರಿಗಳು ಮುಖಂಡರು ಕಾರ್ಯಕರ್ತರು ಉಪಸ್ತರಿದ್ದರು.











